ರಾಜಕೀಯ

ಕಾಂಗ್ರೆಸ್‌ ರೌಡಿಗಳನ್ನು ಖಂಡಿಸುತ್ತದೆಯಂತೆ! ನಿಮ್ಮ ಪಕ್ಷದ ನಾಯಕರ 'ಆ ದಿನಗಳು' ಮರೆತು ಹೋಗಿವೆಯೆ?

ನಟೋರಿಯಸ್ ರೌಡಿ ಶೀಟರ್ ಆಗಿದ್ದ ಸೈಲೆಂಟ್ ಸುನೀಲ ಬಿಜೆಪಿ ಸಂಸದರ ಜೊತೆ ವೇದಿಕೆ ಮೇಲೆ ಕಾಣಿಸಿಕೊಂಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ

ಕಾಂಗ್ರೆಸ್‌ ರೌಡಿಗಳನ್ನು ಖಂಡಿಸುತ್ತದೆಯಂತೆ! ನಿಮ್ಮ ಪಕ್ಷದ ನಾಯಕರ 'ಆ ದಿನಗಳು' ಮರೆತು ಹೋಗಿವೆಯೆ?
ಕೊತ್ವಾಲ್ ಮತ್ತು ಡಿ ಕೆ ಶಿವಕುಮಾರ್
Published On :

ಬೆಂಗಳೂರು: ನಟೋರಿಯಸ್ ರೌಡಿ ಶೀಟರ್ ಆಗಿದ್ದ ಸೈಲೆಂಟ್ ಸುನೀಲ ಬಿಜೆಪಿ ಸಂಸದರ ಜೊತೆ ವೇದಿಕೆ ಮೇಲೆ ಕಾಣಿಸಿಕೊಂಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.  ಬಿಜೆಪಿ ನಾಯಕರಿದ್ದ ವೇದಿಕೆಯಲ್ಲಿ ರೌಡಿ ಸೈಲೆಂಟ್ ಸುನೀಲ ಕಾಣಿಸಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್ ಆದ ನಂತರ ಕಾಂಗ್ರೆಸ್ ಪಕ್ಷ ಬಿಜೆಪಿ ವಿರುದ್ಧ ಹರಿಹಾಯ್ದಿತ್ತು.

ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದೆ, ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಒಂದು ಕಾಲದಲ್ಲಿ ಕೊತ್ವಾಲ್‌ನ ನೆಚ್ಚಿನ ಶಿಷ್ಯ, ತಿಹಾರ್ ಜೈಲಿನಿಂದ ಐ ಎನ್ ಸಿ ಕರ್ನಾಟಕ ರಾಜ್ಯಾಧ್ಯಕ್ಷ ಹುದ್ದೆಗೆ ಬಡ್ತಿ. ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರ "ಆ ದಿನಗಳು" ಮರೆತು ಹೋಗಿದೆಯಾ? ಎಂದು ಪ್ರಶ್ನಿಸಿದೆ.

ಗೂಂಡಾಗಿರಿ, ರೌಡಿಸಂ ಮೇರಿಟ್ ಅಂತ ಪರಿಗಣಿಸಿ, ವಿರೋಧದ ನಡುವೆಯೂ ನಲಪಾಡ್ ಇತ್ತೀಚೆಗೆ ಕರ್ನಾಟಕ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದರು.  ನಿಮಗೆ ಯೂತ್ ಕಾಂಗ್ರೆಸ್ ಅಧ್ಯಕ್ಷರ "ಆ ದಿನಗಳು" ಮರೆತು ಹೋಗಿದೆಯಾ? ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಭೂಗತ ಪಾತಕಿಗಳ ಗರಡಿಯಲ್ಲಿ ಬೆಳೆದ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಕೊಲೆ ಆರೋಪಿ ವಿನಯ್ ಕುಲಕರ್ಣಿ, ಗೂಂಡಾಗಿರಿಯ ಮೊಹಮ್ಮದ್ ನಲಪಾಡ್ ಯೂತ್ ಕಾಂಗ್ರೆಸ್ ನಾಯಕರು!. ಕಾಂಗ್ರೆಸ್‌ ರೌಡಿಗಳನ್ನು ಖಂಡಿಸುತ್ತದೆಯಂತೆ! ಮೊದಲು ನಿಮ್ಮ ಪಕ್ಷದ ನಾಯಕರ "ಆ ದಿನಗಳು" ಹೇಗಿವೆ ಅಂತ ನೋಡಿ ಎಂದು ಲೇವಡಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.