ಬೊಮ್ಮಾಯಿ ದೆಹಲಿ ಟೂರಿಸ್ಟ್, ಸಂಪುಟ ವಿಸ್ತರಣೆಗೆ ಹೈಕಮಾಂಡ್ ಸತಾಯಿಸುತ್ತಿರುವುದು ನೋಡಿ ಪಾಪ ಅನಿಸುತ್ತಿದೆ!
ಸಚಿವ ಸಂಪುಟ ವಿಸ್ತರಣೆ ಹಾಗೂ ಗಡಿ ವಿವಾದ ಸಂಬಂಧ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾಲೇಳೆದ ಕಾಂಗ್ರೆಸ್, ಬೊಮ್ಮಾಯಿ ದೆಹಲಿ ಟೂರಿಸ್ಟ್. ಅವರು ಹೈಕಮಾಂಡ್ ನಾಯಕರು ಭೇಟಿ ಮಾಡಲು...

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಹಾಗೂ ಗಡಿ ವಿವಾದ ಸಂಬಂಧ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾಲೇಳೆದ ಕಾಂಗ್ರೆಸ್, ಬೊಮ್ಮಾಯಿ ದೆಹಲಿ ಟೂರಿಸ್ಟ್. ಅವರು ಹೈಕಮಾಂಡ್ ನಾಯಕರು ಭೇಟಿ ಮಾಡಲು ಸತಾಯಿಸುತ್ತಿರುವುದು ನೋಡಿ ಆಯ್ಯೋ ಪಾಪ ಎನಿಸುತ್ತಿದೆ ಎಂದು ಟ್ವೀಟ್ ಮಾಡಿದೆ.
ಸಿಎಂ ಬೊಮ್ಮಾಯಿ ಅವರು ಇದುವರೆಗೂ 12 ಬಾರಿ ದೆಹಲಿ ಭೇಟಿ ಮಾಡಿದರೂ ರಾಜ್ಯಕ್ಕೆ ನಯಾಪೈಸೆ ಪ್ರಯೋಜನವಾಗಿಲ್ಲ, ಈಗಲೂ ಆಗುವುದಿಲ್ಲ.
ದೆಹಲಿ ಭೇಟಿಯಿಂದ ಬೊಮ್ಮಾಯಿಯವರ ಸಂಕಟ ವಿಸ್ತರಣೆಯಾಗುತ್ತಿದೆಯೇ ಹೊರತು ಸಂಪುಟ ವಿಸ್ತರಣೆಯಾಗುತ್ತಿಲ್ಲ ಎಂದು ಕಾಂಗ್ರೆಸ್ ಛೇಡಿಸಿದೆ.
ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡುತ್ತೇನೆ ಎಂದಿದ್ದ ಅವರಿಗೆ ನಡ್ಡಾ ಅಪಾಯಿಂಟ್ಮೆಂಟ್ ಕೊಡಲು ಸತಾಯಿಸುತ್ತಿರುವುದೇಕೆ?
ಇದನ್ನು ಓದಿ: ಗಡಿ ವಿವಾದ: ಸುಪ್ರೀಂ ನಲ್ಲಿ ನಾಳೆ ವಿಚಾರಣೆ, ರಾಜ್ಯದ ಪರ ಸಮರ್ಥ ವಾದ ನಡೆಸುವ ಭರವಸೆಯಿದೆ- ಸಿಎಂ ಬೊಮ್ಮಾಯಿ
ರಾಜ್ಯದ ಸಿಎಂ ಬೊಮ್ಮಾಯಿಯವರನ್ನ ಕಂಡರೆ ಹೈಕಮಾಂಡಿಗೆ ಅಷ್ಟೊಂದು ತಾತ್ಸಾರವೇ? ಬೊಮ್ಮಾಯಿಯವರು ಅಷ್ಟು ಅಸಮರ್ಥರೆ? ಬೊಮ್ಮಾಯಿಯವರೆಂದರೆ ಬಿಜೆಪಿಯಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ? ಎಂದು ಕಾಂಗ್ರೆಸ್ ಮತ್ತೊಂದು ಟ್ವೀಟ್ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


