ರಾಜಕೀಯ

ಈ ರಾಜ್ಯದ ಜನತೆ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕೆಂದು ಬಯಸುತ್ತಿದ್ದಾರೆ: ಶಾಸಕ ಭೈರತಿ ಸುರೇಶ್

ನಾಯಕರು ವಿವಾದಕ್ಕೆ ತೇಪೆ ಹಾಕಲು ಯತ್ನಿಸಿದರೂ ಕಾಂಗ್ರೆಸ್ ನಲ್ಲಿ ಬಣ ಬಡಿದಾಟ ಇರುವುದು ಬಹಿರಂಗ ಸತ್ಯ. ವಿಪಕ್ಷ ನಾಯಕ -ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ಒಂದೆಡೆಯಾದರೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬಣ ಮತ್ತೊಂದೆಡೆ. ತಮ್ಮ ನಾಯಕರು ಮುಖ್ಯಮಂತ್ರಿಯಾಗಬೇಕೆಂದು ಆಗಾಗ ಸಾರ್ವಜನಿಕವಾಗಿ ಹೇಳಿಕೆ ನೀಡುತ್ತಿರುತ್ತಾರೆ.

ಈ ರಾಜ್ಯದ ಜನತೆ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕೆಂದು ಬಯಸುತ್ತಿದ್ದಾರೆ: ಶಾಸಕ ಭೈರತಿ ಸುರೇಶ್
ಸಿದ್ದರಾಮಯ್ಯ
Published On :

ಬೆಂಗಳೂರು: ನಾಯಕರು ವಿವಾದಕ್ಕೆ ತೇಪೆ ಹಾಕಲು ಯತ್ನಿಸಿದರೂ ಕಾಂಗ್ರೆಸ್ ನಲ್ಲಿ ಬಣ ಬಡಿದಾಟ ಇರುವುದು ಬಹಿರಂಗ ಸತ್ಯ. ವಿಪಕ್ಷ ನಾಯಕ -ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ಒಂದೆಡೆಯಾದರೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬಣ ಮತ್ತೊಂದೆಡೆ. ತಮ್ಮ ನಾಯಕರು ಮುಖ್ಯಮಂತ್ರಿಯಾಗಬೇಕೆಂದು ಆಗಾಗ ಸಾರ್ವಜನಿಕವಾಗಿ ಹೇಳಿಕೆ ನೀಡುತ್ತಿರುತ್ತಾರೆ.

ಇನ್ನು ನಾಲ್ಕೈದು ತಿಂಗಳಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆದು ಸರ್ಕಾರದಲ್ಲಿ ಬದಲಾವಣೆ ಕಾಣಲಿದೆ. ರಾಜ್ಯದ ಪ್ರಮುಖ ಮೂರು ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರು ಸರ್ಕಾರ ರಚಿಸಿ ಅಧಿಕಾರ ಪಡೆಯುವ ಕನಸು ಕಾಣುತ್ತಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ನೆಚ್ಚಿನ ನಾಯಕ ಮುಖ್ಯಮಂತ್ರಿಯಾಗಬೇಕೆಂದು ಆಶಿಸುತ್ತಾರೆ.

ಇಂದು ಸಾರ್ವಜನಿಕ ವೇದಿಕೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿದ್ದರಾಮಯ್ಯ ಆಪ್ತ ಶಾಸಕ ಭೈರತಿ ಸುರೇಶ್, ಈ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗುವಂತಾಗಲಿ, ಈ ರಾಜ್ಯದ ಜನತೆ ಕೂಡ ಸಿದ್ದರಾಮಯ್ಯನವರು ಮತ್ತೊಮ್ಮೆ ಸಿಎಂ ಆಗಬೇಕೆಂದು ಬಯಸುತ್ತಿದ್ದಾರೆ, ಇದಕ್ಕೆ ನಿಮ್ಮೆಲ್ಲರ ಆಶೀರ್ವಾದ ಬೇಕು ಎಂದು ಕೇಳಿಕೊಂಡರು. 

ನಿನ್ನೆಯಷ್ಟೇ ಡಿ ಕೆ ಶಿವಕುಮಾರ್, ತಾವು ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿಕೊಂಡಿದ್ದರು. ಅವರದೇ ಪಕ್ಷದ ಪ್ರಮುಖ ಶಾಸಕರೊಬ್ಬರು ಇಂದು ಈ ರೀತಿ ಹೇಳಿಕೆ ನೀಡಿರುವುದು ಕಾಂಗ್ರೆಸ್ ನಲ್ಲಿ ಬಣ ರಾಜಕೀಯವಿದೆ ಎಂಬುದಕ್ಕೆ ಕೈಗನ್ನಡಿಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.