ಡಿಕೆ ಬ್ರದರ್ಸ್ಗೆ ಮತ್ತೊಮ್ಮೆ ಇಡಿ ಸಂಕಷ್ಟ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ತಿಂಗಳಲ್ಲಿ 2ನೇ ಬಾರಿ ಸಮನ್ಸ್
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಡಿ .ಕೆ ಸುರೇಶ್ ಅವರಿಗೆ ಅ.7ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.

ಬೆಂಗಳೂರು:ಕಾಂಗ್ರೆಸ್ನ ಪ್ರಭಾವಿ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸದ್ಯ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ರಾಜ್ಯದಲ್ಲಿ ಯಶಸ್ವಿಯಾಗಿಸುವ ಜವಾಬ್ದಾರಿ ಹೊತ್ತಿದ್ದಾರೆ. ಸದ್ಯ ಭಾರತ್ ಜೋಡೋ ಯಾತ್ರೆಯಲ್ಲಿ ಫುಲ್ ಬ್ಯುಸಿಯಾಗಿರುವ ಡಿಕೆ ಶಿವಕುಮಾರ್ಗೆ ನಿರ್ದೇಶನಾಯಲಯ (ಇ.ಡಿ)ವೂ ಶಾಕ್ ಕೊಟ್ಟಿದೆ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಡಿ .ಕೆ ಸುರೇಶ್ ಅವರಿಗೆ ಅ.7ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ನ್ಯಾಷನಲ್ ಹೆರಾಲ್ಡ್ ಕೇಸ್ನಲ್ಲೂ ಜಾರಿ ನಿರ್ದೇಶನಾಲಯ ಡಿಕೆ ಬದ್ರರ್ಸ್ಗೆ ಬಲೆ ಬೀಸಿದೆ. ಯಂಗ್ ಇಂಡಿಯಾ, ನ್ಯಾಷನಲ್ ಹೆರಾಲ್ಡ್‌ಗೆ ಡಿಕೆ ಶಿವಕುಮಾರ್ ದೇಣಿಗೆ ನೀಡಿದ್ದಾರೆ. ಅದೇ ವಿಚಾರವಾಗಿ ಇ.ಡಿ ಸಮನ್ಸ್ ಬಂದಿದೆ. ಡಿ.ಕೆ.ಶಿವಕುಮಾರ್ ಜೊತೆಯಲ್ಲಿ ಅವರ ಸೋದರ, ಸಂಸದ ಡಿ.ಕೆ.ಸುರೇಶ್ ಅವರಿಗೂ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯಲ್ಲಿ ಉಂಟಾಗಿದೆ ಎಂದು ಆರೋಪಿಸಲಾಗಿರುವ ಅಕ್ರಮ ಹಣಕಾಸು ವರ್ಗಾವಣೆಗೆ ಸಂಬಂಧಿಸಿದಂತೆ ಈ ವಿಚಾರಣೆ ನಡೆಯಲಿದೆ ಎಂದು ಇ.ಡಿ.ಮೂಲಗಳು ಭಾನುವಾರ ತಿಳಿಸಿವೆ.
ಶಿವಕುಮಾರ್ ಅವರನ್ನು ಸೆ.7ರಂದು ಅಕ್ರಮ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಇ.ಡಿ. ವಿಚಾರಣೆ ನಡೆಸಿತ್ತು. ಕರ್ನಾಟಕದಲ್ಲಿ ವಯನಾಡ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿರುವಂತೆಯೇ ಈ ಬೆಳವಣಿಗೆ ನಡೆದಿದೆ.
ಹಲವು ರಾಜಕಾರಣಿಗಳ ವಿರುದ್ಧ ಪ್ರತ್ಯೇಕ ಆಸ್ತಿ ಪ್ರಕರಣಗಳು ದಾಖಲಾಗಿವೆ. ಇತರರ ತನಿಖೆಗೆ ಎಸಿಬಿಗೆ ಸರ್ಕಾರ ಅನುಮತಿ ನೀಡಿದ್ದರೂ, ನನ್ನ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಹೇಳಿದೆ. ನಾನು ಚುನಾವಣೆ ಮತ್ತು ಇತರ ಪಕ್ಷದ ಕಾರ್ಯಕ್ರಮಗಳಲ್ಲಿ ನಿರತನಾಗಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


