ರಾಜಕೀಯ

ಭಾರತ್ ಜೋಡೋ ಯಾತ್ರೆಯಿಂದ ರಾಹುಲ್ ಗಾಂಧಿ ಫಿಟ್ನೆಸ್ ಪ್ರದರ್ಶನ: ದೇಶ ಆಳಲು ಮೆಂಟಲ್ ಫಿಟ್ನೆಸ್ ಇದೆಯಾ?

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಿಂದ ಅವರ ದೇಹದ ಫಿಟ್ನೆಸ್ ಪ್ರದರ್ಶನವಾಗುತ್ತಿದೆ. ದೇಶದ ನೇತೃತ್ವ ವಹಿಸಲು ರಾಹುಲ್ ಗೆ ಸಾಧ್ಯಾನಾ? ಪಕ್ಷದ ನೇತೃತ್ವ ವಹಿಸದವರಿಗೆ ದೇಶದ ನೇತೃತ್ವ ವಹಿಸಲು ಸಾಧ್ಯವಿಲ್ಲ.

ಭಾರತ್ ಜೋಡೋ ಯಾತ್ರೆಯಿಂದ ರಾಹುಲ್ ಗಾಂಧಿ ಫಿಟ್ನೆಸ್ ಪ್ರದರ್ಶನ: ದೇಶ ಆಳಲು ಮೆಂಟಲ್ ಫಿಟ್ನೆಸ್ ಇದೆಯಾ?
ಶೋಭಾ ಕರಂದ್ಲಾಜೆ
Published On :

ಉಡುಪಿ: ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಿಂದ ಅವರ ದೇಹದ ಫಿಟ್ನೆಸ್ ಪ್ರದರ್ಶನವಾಗುತ್ತಿದೆ. ದೇಶದ ನೇತೃತ್ವ ವಹಿಸಲು ರಾಹುಲ್ ಗೆ ಸಾಧ್ಯಾನಾ? ಪಕ್ಷದ ನೇತೃತ್ವ ವಹಿಸದವರಿಗೆ ದೇಶದ ನೇತೃತ್ವ ವಹಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು, ಮೋದಿಗೆ ಸರಿಸಾಟಿಯಾಗುವ ರಾಹುಲ್ ಕನಸು ಎಂದಿಗೂ ನನಸಾಗುವುದಿಲ್ಲ. ದೇಹದ ಫಿಟ್ನೆಸ್ ಇದ್ದರೆ ಮೆಂಟಲ್ ಫಿಟ್ನೆಸ್ ಇದೆಯಾ? ದೇಶ ಆಳಲು ಮೆಂಟಲ್ ಫಿಟ್ನೆಸ್ ಇದ್ದಾರಾ ಅನ್ನುವುದನ್ನು ದೇಶದ ಜನ ತೀರ್ಮಾನ ಮಾಡುತ್ತಾರೆ ಎಂದು ವ್ಯಂಗ್ಯವಾಡಿದರು.

ಇದೇ ವೇಳೆ ಹಿಜಾಬ್ ಹೋರಾಟದ ಕುರಿತಾಗಿಯೂ ಪ್ರತಿಕ್ರಿಯೆ ನೀಡಿದ ಸಚಿವೆ ಶೋಭಾ ಕರಂದ್ಲಾಜೆ, ಮುಸ್ಲಿಂ ಹೆಣ್ಮಕ್ಕಳಿಗೆ ಶಿಕ್ಷಣ, ಉದ್ಯೋಗ ಸಿಗಬೇಕು, ಸ್ವಂತ ಕಾಲಲ್ಲಿ ನಿಲ್ಲಬೇಕು. ಗಂಡಸರು ಹಾಕಿದ ತಾಳಕ್ಕೆ ಕುಣಿದು, ನಿಮ್ಮ ಇಚ್ಛೆಗೆ ವಿರುದ್ಧವಾಗಿ ನಡೆಯಬೇಡಿ. ಈಗಲಾದರೂ ಅರ್ಥ ಮಾಡಿಕೊಳ್ಳಿ ಎಂದು ಹಿಜಾಬ್ ಪರ ಹೋರಾಟದಲ್ಲಿ ಪಾಲ್ಗೊಂಡ ವಿದ್ಯಾರ್ಥಿನಿಯರಲ್ಲಿ ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.