ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿರೋಧಿ: ರಾಹುಲ್ ಗಾಂಧಿ
ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಿರೋಧಿ ಎಂದು ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದಾರೆ.

ಬಳ್ಳಾರಿ: ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಿರೋಧಿ ಎಂದು ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದಾರೆ.
ಭಾರತ ಜೋಡೋ ಯಾತ್ರೆ ಭಾಗವಾಗಿ ಬಳ್ಳಾರಿಯಲ್ಲಿ ಶನಿವಾರ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಿರೋಧಿಯಾಗಿದೆ. ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಮಾಣ ಶೇ.50ರಷ್ಟು ಹೆಚ್ಚಾಗಿದೆ. ಈ ವರ್ಗದ ಜನರ ಅಭಿವೃದ್ಧಿಗೆ ಸಿಗಬೇಕಿದ್ದ ಸುಮಾರು 8 ಸಾವಿರ ಕೋಟಿ ಹಣವನ್ನು ಬೇರೆ ಕಾರ್ಯಕ್ಕೆ ವರ್ಗಾಯಿಸಲಾಗಿದೆ ಎಂದು ವಿವರಿಸಿದರು.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ನಾಗಮೋಹನ್ ದಾಸ್ ಅವರ ಸಮಿತಿ ರಚಿಸಲಾಗಿದೆ. ಆ ಸಮಿತಿಯು ಎಸ್ ಟಿ ಸಮುದಾಯದ ಮೀಸಲಾತಿ ಪ್ರಮಾಣವನ್ನು ಶೇ.3ರಿಂದ ಶೇ.7.5ರಷ್ಟು ಏರಿಕೆ ಮಾಡಲು, ಎಸ್ ಸಿ ಸಮುದಾಯದ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಏರಿಕೆ ಮಾಡಲು ಶಿಫಾರಸ್ಸು ನೀಡಿತ್ತು. ಬಿಜೆಪಿ ಸರ್ಕಾರ ಇದನ್ನು ಜಾರಿಗೊಳಿಸಿ ಅನುಷ್ಠಾನಕ್ಕೆ ತರಲು ಮೀನಾಮೇಷ ಎಣಿಸುತ್ತಿರುವುದೇಕೆ. ರಾಜ್ಯ ಸರ್ಕಾರ ಸಬೂಬು ಹೇಳುವುದನ್ನು ಬಿಟ್ಟು ಕೂಡಲೇ ಇದನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಆರ್ಟಿಕಲ್ 371 ವಿಶೇಷ ಸ್ಥಾನಮಾನ ನೀಡಲು ನಿರಾಕರಿಸಿತ್ತು. ವಾಜಪೇಯಿ ಹಾಗೂ ಅಡ್ವಾಣಿ ಅವರು ನಿರಾಕಸಿದ್ದರು. ನಿಮ್ಮ ಸಂಕಷ್ಟ ಅರಿತು ಕಾಂಗ್ರೆಸ್ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು ವಿಶೇಷ ಸ್ಥಾನಮಾನ ನೀಡಿದ್ದೆವು. ಇದರ ಪರಿಣಾಮವಾಗಿ ಈ ಭಾಗದ ಸಾವಿರಾರು ಮಂದಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಅವಕಾಶ ಸಿಕ್ಕಿದ್ದು, ಸಾವಿರಾರು ಕೋಟಿ ವಿಶೇಷ ಅನುದಾನ ಸಿಕ್ಕಿದೆ ಎಂದು ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


