ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಶೀಘ್ರವೇ ದೆಹಲಿಗೆ: ಸಿಎಂ ಬಸವರಾಜ ಬೊಮ್ಮಾಯಿ
ಜನಸಂಕಲ್ಪ ಯಾತ್ರೆಯ ನಡುವೆ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಹಿರಿಯ ನಾಯಕರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಳಗಾವಿ: ಜನಸಂಕಲ್ಪ ಯಾತ್ರೆಯ ನಡುವೆ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಹಿರಿಯ ನಾಯಕರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಿನ್ನೆ ಬೆಳಗಾವಿಯಲ್ಲಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಬೆಳಗಾವಿಗೆ ಶುಭ ಸುದ್ದಿ ಇದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ನಿರ್ಣಯ ಕೈಗೊಂಡಾಗ ಎಲ್ಲರಿಗೂ ತಿಳಿಸಲಾಗುವುದು, ಏನೇ ಆದರೂ ಮಾಧ್ಯಮದವರ ಮೂಲಕ ರಾಜ್ಯದ ಜನತೆಗೆ ತಿಳಿಸಿಯೇ ಮಾಡುತ್ತೇವೆ ಎಂದರು.
ರಾಜ್ಯ ಹಾಗೂ ಭಾಷೆಗಳು ಅಡಚಣೆ ಆಗಬಾರದು
ಕೊಲ್ಲಾಪುರದ ಕನೇರಿ ಮಠದಲ್ಲಿ ಕನ್ನಡ ಭವನ ಕಟ್ಟಲು ಶಿವಸೇನೆಯವರು ವಿರೋಧಿಸುತ್ತಿರುವ ಬಗ್ಗೆ ಪ್ರತಿಕ್ರಯಿಸಿದ ಸಿಎಂ ಬೊಮ್ಮಾಯಿ, ಈಗಾಗಲೇ ಮಹಾರಾಷ್ಟ್ರದಲ್ಲಿ ಹತ್ತು ಹಲವಾರು ಸಂಘಗಳ ಕನ್ನಡ ಭವನಗಳು ಇವೆ. ಹಲವಾರು ದೇವಸ್ಥಾನಗಳು, ಯಾತ್ರಿನಿವಾಸಗಳೂ ಇವೆ. ಈ ವಿಚಾರದಲ್ಲಿ ರಾಜ್ಯ ಹಾಗೂ ಭಾಷೆಗಳು ಅಡಚಣೆ ಆಗಬಾರದು ಎಂಬುದು ನನ್ನ ಅನಿಸಿಕೆ ಎಂದರು.
ಕೆಎಲ್ ಇ ಸಂಸ್ಥೆಯ ಅಧ್ಯಕ್ಷ ಪ್ರಭಾಕರ ಕೋರೆಯವರ 75 ನೇ ವರ್ಷದ ಅಮೃತ ಮಹೋತ್ಸವ ಆಚರಿಸುತ್ತಿರುವುದು ಸಂತೋಷದ ವಿಷಯ. ಇಡೀ ಉತ್ತರ ಕರ್ನಾಟಕಕ್ಕೆ ಅವರು ಸುದೀರ್ಘ ನಾಲ್ಕು ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಶೈಕ್ಷಣಿಕ, ಆರೋಗ್ಯ, ಕೃಷಿ, ಸಹಕಾರಿ ಕ್ಷೇತ್ರಗಳಲ್ಲಿ ಕೆಲಸ ಮಾಡಿ ಜನಪ್ರಿಯರಾಗಿದ್ದಾರೆ. ಜನಾನುರಾಗಿಯಾದ ಕೋರೆಯವರಲ್ಲಿ ನಿರಂತರವಾಗಿ ಕೆಲಸ ಮಾಡುವ ಶಕ್ತಿ ಇದೆ. ಎಲ್ಲರೊಂದಿಗೂ ಸ್ನೇಹದಿಂದಿರುವ ಸ್ನೇಹಜೀವಿ. ಈ ಸಮಾರಂಭ ಅರ್ಥಪೂರ್ಣವಾಗಿರಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


