ಉತ್ತರ ಕರ್ನಾಟಕದಲ್ಲಿ 30 ಸ್ಥಾನ ಗೆಲ್ಲುವ ವಿಶ್ವಾಸ: ಹೆಚ್'ಡಿ. ಕುಮಾರಸ್ವಾಮಿ
ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಸಾಧನೆಯು ಪ್ರತಿಪಕ್ಷಗಳನ್ನು ದಿಗ್ಭ್ರಮೆಗೊಳಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ.

ಮೈಸೂರು: ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಸಾಧನೆಯು ಪ್ರತಿಪಕ್ಷಗಳನ್ನು ದಿಗ್ಭ್ರಮೆಗೊಳಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ.
ಮೈಸೂರಿನಲ್ಲಿ ನಡೆದ ಜೆಡಿಎಸ್ ನಾಯಕರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷವು ಮುಂಬೈ-ಕರ್ನಾಟಕ ಮತ್ತು ಕಲ್ಯಾಣ-ಕರ್ನಾಟಕ ಪ್ರದೇಶಗಳಲ್ಲಿ 30 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಮೀರಿಸುವ ಉಜ್ವಲ ಅವಕಾಶಗಳನ್ನು ಹೊಂದಿದೆ. ವಿಜಯಪುರ, ಬಾಗಲಕೋಟೆ, ಕಲಬುರಗಿ, ರಾಯಚೂರು ಸೇರಿದಂತೆ ಹಲವು ಕಡೆ ಜೆಡಿಎಸ್ ನಾಯಕರು ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸುತ್ತಿದ್ದಾರೆ. ಸ್ಪಷ್ಟ ಬಹುಮತ ಪಡೆಯುವಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ವಿಫಲವಾಗಿದ್ದೇ ಆದರೆ, ಆ ಪಕ್ಷಗಳಿಗೆ ಜೆಡಿಎಸ್ ಪಕ್ಷದ ಸಹಾಯದ ಅಗತ್ಯ ಬೀಳುತ್ತದೆ. ಉಚಿತ ಶಿಕ್ಷಣ, ಆರೋಗ್ಯ, ವಸತಿ, ನೀರಾವರಿ, ಉದ್ಯೋಗ ಕಲ್ಪಿಸುವ ಪಂಚರತ್ನ ಕಾರ್ಯಕ್ರಮದ ಮೂಲಕ ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದಿಂದ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಹೇಳಿದರು.
ಈ ಬಾರಿಯ ಚುನಾವಣೆಯಲ್ಲಿ ಒಂದು ವೇಳೆ ಪಕ್ಷ ಅಧಿಕಾರಕ್ಕೆ ಬರದಿದ್ದರೆ ಪಕ್ಷವನ್ನಾ ವಿಸರ್ಜಿಸುವುದಾಗಿ ಇದೇ ವೇಳೆ ಕುಮಾರಸ್ವಾಮಿ ಘೋಷಿಸಿದರು.
ಬಳಿಕ ತಮ್ಮ ನೇತೃತ್ವದ ಸಮ್ಮಿಶ್ರ ಸರ್ಕಾರ ಕೃಷಿ ಸಾಲ ಮನ್ನಾ ಮಾಡಿದ್ದನ್ನು ಸ್ಮರಿಸಿದ ಅವರು, ಜೆಡಿಎಸ್ 123 ಸ್ಥಾನಗಳನ್ನು ಗೆಲ್ಲುವ ಮೂಲಕ ಉತ್ತಮ ಆಡಳಿತ ನೀಡಲಿದೆ ತಿಳಿಸಿದರು.
ಬಳಿಕ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದನ್ನು ಸ್ವಾಗತಿಸಿದ ಅವರು, ಖರ್ಗೆ ಅವರ ಆಯ್ಕೆ ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಂದು ಶಕ್ತಿ ಕೇಂದ್ರಕ್ಕೆ ಕಾರಣವಾಗಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


