ರಾಜಕೀಯ

ಕಾಂಗ್ರೆಸ್-ಬಿಜೆಪಿ ಸೋಲಿಸಲು ಒಗ್ಗೂಡಿ: ಪಕ್ಷದ ಮುಖಂಡರಿಗೆ ದೇವೇಗೌಡ ಕರೆ

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳನ್ನು ಸೋಲಿಸಲು ಪಕ್ಷದ ನಾಯಕರು ಒಗ್ಗಟ್ಟಾಗಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕರೆ ಗುರುವಾರ ನೀಡಿದರು.

ಕಾಂಗ್ರೆಸ್-ಬಿಜೆಪಿ ಸೋಲಿಸಲು ಒಗ್ಗೂಡಿ: ಪಕ್ಷದ ಮುಖಂಡರಿಗೆ ದೇವೇಗೌಡ ಕರೆ
ಮೈಸೂರಿನಲ್ಲಿ ದೇವೇಗೌಡ
Published On :

ಮೈಸೂರು: ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳನ್ನು ಸೋಲಿಸಲು ಪಕ್ಷದ ನಾಯಕರು ಒಗ್ಗಟ್ಟಾಗಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕರೆ ಗುರುವಾರ ನೀಡಿದರು. 

ಅಲ್ಪಕಾಲದ ಅನಾರೋಗ್ಯದಿಂದ ಚೇತರಿಸಿಕೊಂಡಿರುವ ದೇವೇಗೌಡ ಅವರು, ಎರಡು ದಿನಗಳ ಮೈಸೂರಿನಲ್ಲಿ ನಡೆಯುತ್ತಿರುವ ಕಾರ್ಯಾಗಾರದಲ್ಲಿ ಪಾಲ್ಗೊಂಡರು.

ಈ ವೇಳೆ ಮಾತನಾಡಿದ ಅವರು, ಜೆಡಿಎಸ್‌ನಲ್ಲಿನ ಒಗ್ಗಟ್ಟು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ವಿನಾಶ ತಂದೊಡ್ಡಲಿದೆ. ನನ್ನ ಮಗನನ್ನು ಮುಖ್ಯಮಂತ್ರಿ ಮಾಡಲು ಮಾತ್ರವಲ್ಲದೆ, ಪಕ್ಷವನ್ನು ಉಳಿಸಲು ಮುಂದಿನ ಚುನಾವಣೆ ವೇಳೆ ಸಕ್ರಿಯವಾಗಿ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದರು. 

ಇದೇ ವೇಳೆ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳ ಕುರಿತು ಲಾಭ ಪಡೆದುಕೊಳ್ಳಲು ಯತ್ನಿಸುತ್ತಿರುವ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ವಿರುದ್ಧ ದೇವೇಗೌಡ ಅವರು ಕಿಡಿಕಾರಿದರು.

ಪ್ರತಿ ವರ್ಗವನ್ನೂ ಗುರುತಿಸಿದ ವ್ಯಕ್ತಿ ಇದ್ದರೆ ಅದು ನಾನು. ಇದು ಅಹಂಕಾರವಲ್ಲ. ಸತ್ಯ ಹೇಳಲು ಯಾರ ಮುಂದೆ ಬೇಕಾದರೂ ನಿಲ್ಲಬಲ್ಲೆ. ಯಾವ ಆತಂಕವೂ ನನಗಿಲ್ಲ. ಮುಸ್ಲಿಮರಿಗೆ ಮೀಸಲಾತಿ ಕೊಟ್ಟವರು ಕಾಂಗ್ರೆಸ್ಸೋ, ಬಿಜೆಪಿಯೋ? ಶಕ್ತಿ ಇದ್ದರೆ ಮುಂದೆ ಬರಲಿ. ಎಲ್ಲೇ ವೇದಿಕೆ ಸಿದ್ಧಪಡಿಸಿದರೂ ಬರುತ್ತೇನೆ ಎಂದು ಗುಡುಗಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.