ಭಾರತ್ ಜೋಡೊ ಯಾತ್ರೆಯಲ್ಲಿ ನಟಿ ರಮ್ಯಾ ಪ್ರತ್ಯಕ್ಷ, ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಪದ್ಮಾವತಿ
ಭಾರತ್ ಜೋಡೋ ಯಾತ್ರೆಯಲ್ಲಿ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರು ಶನಿವಾರ ಪ್ರತ್ಯಕ್ಷರಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದರು.

ರಾಯಚೂರು: ಭಾರತ್ ಜೋಡೋ ಯಾತ್ರೆಯಲ್ಲಿ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರು ಶನಿವಾರ ಪ್ರತ್ಯಕ್ಷರಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದರು.
ರಾಜ್ಯದಲ್ಲಿ ಭಾರತ್ ಜೋಡೊ ಯಾತ್ರೆಯ ಕೊನೆಯ ದಿನವಾದ ಇಂದು ರಾಯಚೂರು ನಗರದಲ್ಲಿ ರಮ್ಯಾ ಭಾಗವಹಿಸಿದ್ದರು. ಮಂತ್ರಾಲಯ ಮಾರ್ಗದ ಐಬಿ ಕಾಲೋನಿಯಿಂದ ಸಾರ್ವಜನಿಕ ಸಭೆ ಆಯೋಜಿಸಿದ್ದ ವಾಲ್ಕಟ್ ಮೈದಾನದವರೆಗೂ ರಾಹುಲ್‌ಗಾಂಧಿ ಅವರೊಂದಿಗೆ ಮಾತನಾಡುತ್ತಲೇ ಪಾದಯಾತ್ರೆ ಮಾಡಿದರು.
ಪಾದಯಾತ್ರೆಯಲ್ಲಿ ರಮ್ಯಾ ಅವರು ಸೇರಿಕೊಳ್ಳುತ್ತಿದ್ದಂತೆ ಜನರು ಗುಂಪಾಗುವುದು ಹೆಚ್ಚಳವಾಯಿತು. ಎಂದಿನಂತೆ ರಾಹುಲ್‌ಗಾಂಧಿ ಅವರು ರಸ್ತೆ ಎರಡು ಅಂಚಿನಲ್ಲಿ ನಿಂತಿದ್ದ ಜನರತ್ತ ಕೈಬೀಸಿಕೊಂಡು ಮುನ್ನಡೆದರು.
ಈ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಪಸ್ಥಿತರಿದ್ದರು. ಕನ್ಯಾಕುಮಾರಿಯಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಿರುವ ರಾಹುಲ್ ಗಾಂಧಿ ಅವರು ಕಳೆದ ಮೂರು ವಾರಗಳಿಂದ ಕರ್ನಾಟಕದಲ್ಲಿ ಯಾತ್ರೆ ನಡೆಸಿದ್ದಾರೆ. ಕರ್ನಾಟಕದಿಂದ ಇನ್ನೂ ಕಾಶ್ಮೀರದವರೆಗೂ ಈ ಯಾತ್ರೆ ಮುಂದುವರಿಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


