ರಾಜಕೀಯ

ಆನಂದ್ ಮಾಮನಿ ನಿಧನ: ಕಲಬುರಗಿ ಜನಸಂಕಲ್ಪ ಸಮಾವೇಶ ರದ್ದುಗೊಳಿಸಲು ಸಿಎಂ ಆದೇಶ

ವಿಧಾನಸಭೆ ಡೆಪ್ಯುಟಿ ಸ್ಪೀಕರ್​ ಆನಂದ್ ಮಾಮನಿ ನಿಧನ ಹಿನ್ನೆಲೆ ಇಂದು ಕಲಬುರಗಿಯಲ್ಲಿ ನಡೆಯಬೇಕಿದ್ದ ಬಿಜೆಪಿ ‘ಜನಸಂಕಲ್ಪ’ ಸಮಾವೇಶ ರದ್ದು ಮಾಡಲಾಗಿದೆ.

ಆನಂದ್ ಮಾಮನಿ ನಿಧನ: ಕಲಬುರಗಿ ಜನಸಂಕಲ್ಪ ಸಮಾವೇಶ ರದ್ದುಗೊಳಿಸಲು ಸಿಎಂ ಆದೇಶ
ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ವಿಧಾನಸಭೆ ಡೆಪ್ಯುಟಿ ಸ್ಪೀಕರ್​ ಆನಂದ್ ಮಾಮನಿ ನಿಧನ ಹಿನ್ನೆಲೆ ಇಂದು ಕಲಬುರಗಿಯಲ್ಲಿ ನಡೆಯಬೇಕಿದ್ದ ಬಿಜೆಪಿ ‘ಜನಸಂಕಲ್ಪ’ ಸಮಾವೇಶ ರದ್ದು ಮಾಡಲಾಗಿದೆ.

ಸಿಎಂ ಸಚಿವಾಲಯದ ಅಧಿಕಾರಿಗಳಿಗೆ ಕಲಬುರಗಿ ಪ್ರವಾಸ ರದ್ದುಪಡಿಸಲು ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ. ಆಳಂದ ಹಾಗೂ ಚಿತ್ತಾಪುರ ಪಟ್ಟಣಗಳಲ್ಲಿ ಇಂದು ಜನಸಂಕಲ್ಪ ಯಾತ್ರೆ ನಡೆಯಬೇಕಿತ್ತು. ಈಗಾಗಲೇ ವೇದಿಕೆ ಸೇರಿದಂತೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ಹೀಗಾಗಿ ನಾಳೆ ಕಲಬುರಗಿ ಜಿಲ್ಲೆಗೆ ಸಮಯ ನೀಡುವಂತೆ ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ.

ಇನ್ನು ಇಂದಿನಿಂದ 3 ದಿನಗಳ ಕಾಲ ಕಿತ್ತೂರು ಉತ್ಸವ ನಡೆಯಬೇಕಿತ್ತು. ಆದರೆ ಆನಂದ್ ಮಾಮನಿ ವಿಧಿವಶ ಹಿನ್ನೆಲೆ ಉತ್ಸವ ರದ್ದಾಗುತ್ತಾ? ಮುಂದೂಡಲಾಗುತ್ತಾ ಎಂದು ರಾಜ್ಯ ಸರ್ಕಾರದ ನಿರ್ಧಾರಕ್ಕಾಗಿ ಬೆಳಗಾವಿ ಜಿಲ್ಲಾಡಳಿತ ಕಾಯುತ್ತಿದೆ.

ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಕಿತ್ತೂರು ಉತ್ಸವಕ್ಕೆ ನಿರ್ಧರಿಸಲಾಗಿತ್ತು. ಇಂದು ಸಂಜೆ ಆಯೋಜಿಸಿದ್ದ ಕಿತ್ತೂರು ಉತ್ಸವದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಬೇಕಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.