ರಾಜಕೀಯ

ಭಾರತ್ ಜೋಡೋ ಯಾತ್ರೆಗೆ ಜನರ ಪ್ರತಿಕ್ರಿಯೆಯಿಂದ ಕಾಂಗ್ರೆಸ್ ಉತ್ಸುಕವಾಗಿದೆ: ಡಿಕೆ.ಶಿವಕುಮಾರ್

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಜನರ ಪ್ರತಿಕ್ರಿಯೆಯಿಂದ ಕಾಂಗ್ರೆಸ್ ಉತ್ಸುಕವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶನಿವಾರ ಹೇಳಿದರು.

ಭಾರತ್ ಜೋಡೋ ಯಾತ್ರೆಗೆ ಜನರ ಪ್ರತಿಕ್ರಿಯೆಯಿಂದ ಕಾಂಗ್ರೆಸ್ ಉತ್ಸುಕವಾಗಿದೆ: ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್
Published On :

ರಾಯಚೂರು: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಜನರ ಪ್ರತಿಕ್ರಿಯೆಯಿಂದ ಕಾಂಗ್ರೆಸ್ ಉತ್ಸುಕವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶನಿವಾರ ಹೇಳಿದರು. 

ಭಾರತ್ ಜೋಡೋ ಯಾತ್ರೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾತ್ರೆ ವೇಳೆ ಸಾಕಷ್ಟು ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯ ವೇಳೆ ಬಿಡುಗಡೆ ಮಾಡಲಿರುವ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಆ ಸಮಸ್ಯೆಗಳಿಗೆ ಪರಿಹಾರವನ್ನು ನೀಡಲಾಗುತ್ತದೆ ಎಂದು ಹೇಳಿದರು. 

ಪ್ರಸ್ತುತ ಸರ್ಕಾರವು ಸೃಷ್ಟಿಸಿರುವ ಹಲವಾರು ಸಮಸ್ಯೆಗಳಿಂದ ಜನರು ನೆಮ್ಮದಿಯ ಜೀವನ ನಡೆಸುವುದು ಕಷ್ಟಕರವಾಗಿದೆ, ಸಾವಿರಾರು ಯುವಕರು ನಿರುದ್ಯೋಗಿಗಳಾಗಿದ್ದಾರೆ ಮತ್ತು ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಹೆಚ್ಚುತ್ತಿದೆ. ಹೆಚ್ಚಿನ ಸಂಖ್ಯೆಯ ರೈತರು, ಮಹಿಳೆಯರು, ಯುವಕರು ಮತ್ತು ಮಕ್ಕಳು ಯಾತ್ರೆಯಲ್ಲಿ ಸ್ವಯಂಪ್ರೇರಿತರಾಗಿ ಭಾಗವಹಿಸಿದರು, ಏಕೆಂದರೆ ಇದನ್ನು ಅವರು ರಾಜಕೀಯೇತರ ಎಂದು ಪರಿಗಣಿಸಿದ್ದಾರೆ. ಇದು ಅವರ ಜೀವನಕ್ಕೆ ಹೊಸ ಬೆಳಕೆ ನೀಡುತ್ತದೆ ಎಂದು ನಂಬಿದ್ದಾರೆಂದು ತಿಳಿಸಿದರು. 

ಇಂದಿರಾ ಗಾಂಧಿ ಕರ್ನಾಟಕಕ್ಕೆ ಭೇಟಿ ನೀಡಿದಾಗ, ಸಾವಿರಾರು ಜನರು ಅವರನ್ನು ನೋಡಲು ಹೋದರು. ರಾಹುಲ್ ಗಾಂಧಿ ಮೇಲೂ ಜನರು ಅಷ್ಟೇ ಪ್ರೀತಿ, ವಾತ್ಸಲ್ಯ ತೋರುತ್ತಿದ್ದಾರೆ. ಅವರ ಭಾವನೆಗಳಿಗೆ ಕಾಂಗ್ರೆಸ್ ಸ್ಪಂದಿಸಲಿದೆ ಎಂದರು. 

3,750 ಕಿಮೀ ಪಾದಯಾತ್ರೆ ಕೈಗೊಂಡ ಏಕೈಕ ನಾಯಕ ರಾಹುಲ್. ಮೊದಮೊದಲು ನಮಗೂ ಇಷ್ಟು ದೂರ ಕ್ರಮಿಸುವುದು ರಾಹುಲ್ ಮತ್ತಿತರರಿಗೆ ಕಷ್ಟ ಎಂದುಕೊಂಡಿದ್ದೆವು. ಆದರೆ ಈಗ, ರಾಹುಲ್ ಅವರ ಉತ್ಸಾಹ ಮತ್ತು ಜನರ ಉತ್ಸಾಹವನ್ನು ನೋಡಿದ ನಂತರ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ತೀರ್ಮಾನಕ್ಕೆ ಬಂದಿದ್ದೇವೆ ಎಂದು ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.