ರಾಜಕೀಯ

'ನನ್ನ ಜನ ಹೊಟ್ಟೆಗೆ ಹಿಟ್ಟಿಲ್ಲದೆ ಸಾಯುತ್ತಿದ್ದಾರೆ, ಬದುಕು ಕಟ್ಟಲು ನೋಡಿ: ಸಾತ್ಯಕಿ ಯಾರು? ಸಾವರ್ಕರ್ ಮೊಮ್ಮಗನ ಕಟ್ಟಿಕೊಂಡು ಏನಾಗಬೇಕು?'

ಸಾವರ್ಕರ್ ಮೊಮ್ಮಗನ ಕಟ್ಟಿಕೊಂಡು ನನಗೆ ಏನಾಗಬೇಕು. ನನ್ನ ಜನ ಹೊಟ್ಟೆಗೆ ಹಿಟ್ಟಿಲ್ಲದೆ ಸಾಯುತ್ತಿದ್ದಾರೆ. ಸಾತ್ಯಕಿ ಯಾರು, ಯಾರು ಆ ಮನುಷ್ಯ? ಅವರಿಗೆ ಏನು ಗೊತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

'ನನ್ನ ಜನ ಹೊಟ್ಟೆಗೆ ಹಿಟ್ಟಿಲ್ಲದೆ ಸಾಯುತ್ತಿದ್ದಾರೆ, ಬದುಕು ಕಟ್ಟಲು ನೋಡಿ: ಸಾತ್ಯಕಿ ಯಾರು? ಸಾವರ್ಕರ್ ಮೊಮ್ಮಗನ ಕಟ್ಟಿಕೊಂಡು ಏನಾಗಬೇಕು?'
ಎಚ್.ಡಿ ಕುಮಾರಸ್ವಾಮಿ
Published On :

ಮಡಿಕೇರಿ: ಸಾವರ್ಕರ್ ಮೊಮ್ಮಗನ ಕಟ್ಟಿಕೊಂಡು ನನಗೆ ಏನಾಗಬೇಕು. ನನ್ನ ಜನ ಹೊಟ್ಟೆಗೆ ಹಿಟ್ಟಿಲ್ಲದೆ ಸಾಯುತ್ತಿದ್ದಾರೆ. ಸಾತ್ಯಕಿ ಯಾರು, ಯಾರು ಆ ಮನುಷ್ಯ? ಅವರಿಗೆ ಏನು ಗೊತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮಡಿಕೇರಿಯಲ್ಲಿ ಮಾತಾನಾಡಿದ ಅವರು,  ಮೊದಲು ಜನರ ಬದುಕನ್ನು ಕಟ್ಟಲು ನೋಡಿ. ಕೊಡಗಿನಲ್ಲಿ ಮೂರು ವರ್ಷದಿಂದ ಭೂಕುಸಿತದಿಂದ ಮನೆ, ಬೆಳೆ ಹಾಳಾಗಿದೆ. ಅವರಿಗೆ ಏನು ಕೊಟ್ಟಿದ್ದೀರಿ ಮೊದಲು ಹೇಳಿ. ಆಮೇಲೆ ನಿಮ್ಮ ಹಿಂದಿ ಭಾಷೆ ಬಗ್ಗೆ ಚರ್ಚೆ ಮಾಡಿ. ಸಾವರ್ಕರ್ ಮಗನೋ, ಮೊಮ್ಮಗನೋ ಇಲ್ಲಿಗೆ ಬಂದು ನಮಗೆ ಬೋಧನೆ ಮಾಡುವುದು ಏನಿದೆ. ಮೊದಲು ಜನರ ಬದುಕನ್ನು ಕಟ್ಟಲು ನೋಡಿ ಅವರ ಉಪದೇಶ ಕಟ್ಟಿಕೊಂಡು ನನಗೆ ಏನೂ ಆಗಬೇಕಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಸಚಿವ ಸೋಮಣ್ಣ ಮತ್ತು ಬಿಜೆಪಿಯವರ ವಿರುದ್ಧ ಕಿಡಿಕಾರಿದ ಹೆಚ್.ಡಿ.ಕುಮಾರಸ್ವಾಮಿ, ಅದು ಬಿಜೆಪಿಯವರ ಸಂಸ್ಕೃತಿಯನ್ನು ತೋರಿಸುತ್ತದೆ. ಅವರ ನಡವಳಿಕೆಯನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಅವರು ಎರಡು ತರಹದ ಮುಖ ಹೊಂದಿದ್ದಾರೆ. ಎದುರು ಸಿಕ್ಕಾಗ ಒಂದು ರೀತಿ ಮಾತನಾಡಿಸುತ್ತಾರೆ. ಆದರೆ ಒಳಗೆ ಇರುವ ನಡವಳಿಕೆಯೇ ಬೇರೆ ಇದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.