ರಾಶಿ ರಾಶಿ ಹಗರಣಗಳ ಅನಭಿಷಿಕ್ತ ದೊರೆ ರೀಡುರಾಮಯ್ಯ: ಬಿಜೆಪಿ ಕಿಡಿ
ಕಾಂಗ್ರೆಸ್ ಸರ್ಕಾರ ಹಗರಣ ಮಾಡಲೆಂದೇ ಅಧಿಕಾರಕ್ಕೆ ಬಂದಿದ್ದೋ ಎಂಬ ರೀತಿಯಲ್ಲಿ ಭ್ರಷ್ಟ ರಾಮಯ್ಯ ಸರ್ಕಾರ ಆಡಳಿತ ನಡೆಸಿತ್ತು. ಹಗರಣಗಳ ಸರಮಾಲೆಯನ್ನೇ ಕೊರಳಿಗೆ ಹಾಕಿ ಓಡಾಡಿದ ಖ್ಯಾತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ಕಿಡಿಕಾರಿದೆ.

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಗರಣ ಮಾಡಲೆಂದೇ ಅಧಿಕಾರಕ್ಕೆ ಬಂದಿದ್ದೋ ಎಂಬ ರೀತಿಯಲ್ಲಿ ಭ್ರಷ್ಟ ರಾಮಯ್ಯ ಸರ್ಕಾರ ಆಡಳಿತ ನಡೆಸಿತ್ತು. ಹಗರಣಗಳ ಸರಮಾಲೆಯನ್ನೇ ಕೊರಳಿಗೆ ಹಾಕಿ ಓಡಾಡಿದ ಖ್ಯಾತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ಕಿಡಿಕಾರಿದೆ.
ಸರಣಿ ಟ್ವೀಟ್ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿರುವ ಬಿಜೆಪಿ, ರಾಶಿ ರಾಶಿ ಹಗರಣಗಳ ಅನಭಿಷಿಕ್ತ ದೊರೆ ಎಂದರೆ ಅದು ರೀಡು ರಾಮಯ್ಯ. ಅನ್ನಭಾಗ್ಯ ಅಕ್ಕಿ ಕಳವು, ಅರ್ಕಾವತಿ ರೀಡೂ ಹಗರಣ, ಹಾಸಿಗೆ ತಲೆದಿಂಬು ಖರೀದಿ ಹಗರಣ, ಕಲ್ಲು ಗಣಿಗಾರಿಕೆ, ಮರಳು ದಂಧೆ, ಟ್ರಾನ್ಸ್ ಫರ್ ದಂದೆ, ಭ್ರಷ್ಟರಾಮಯ್ಯ ಇದಕ್ಕೆಲ್ಲಾ ಪಡೆದ ಕಮೀಷನ್ ಎಷ್ಟು? ಎಂದು ಪ್ರಶ್ನಿಸಿದೆ.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿಯನ್ನು ತಮ್ಮ ಎಟಿಎಂ ರೀತಿ ಬಳಸಿದ್ದ ಕೆ.ಜೆ. ಜಾರ್ಜ್ ಸಿದ್ದರಾಮಯ್ಯ ಪಾಲಿನ ಎಟಿಎಂ ಆಗಿದ್ದರು. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 1,400 ಕೋಟಿ ಹಗರಣ ನಡೆದಿತ್ತು. ಈ ಎಲ್ಲಾ ಹಗರಣಗಳಿಗೂ ಕಾವಲುಗಾರನಾಗಿದ್ದು ಭ್ರಷ್ಟರಾಮಯ್ಯ, ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರು ಖಾತೆ ನಿರ್ವಹಣೆ ಮಾಡುವ ಬದಲು ತಮ್ಮ ಖಾತೆ ಭರ್ತಿ ಮಾಡಿಕೊಂಡಿದ್ದರು ಎಂದು ಆರೋಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


