ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ನೇಮಕ
ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕ (ಓಬಿಸಿ) ದ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ.

ಬೆಂಗಳೂರು: ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕ (ಓಬಿಸಿ) ದ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ.
ಎಐಸಿಸಿಯ ಒಬಿಸಿ ಘಟಕದ ಅಧ್ಯಕ್ಷ ಕ್ಯಾಫ್ಟನ್ ಅಜಯ್ ಸಿಂಗ್ ಯಾದವ್ ಅವರು ಈ ನೇಮಕದ ಆದೇಶ ಹೊರಡಿಸಿದ್ದಾರೆ. ಸೊರಬ ಕ್ಷೇತ್ರದ ಮಾಜಿ ಜೆಡಿಎಸ್ ಶಾಸಕರಾಗಿದ್ದ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಳೆದ 2021 ಜುಲೈನಲ್ಲಿ ಕಾಂಗ್ರೆಸ್ ಸೇರಿದ್ದರು
ಈ ಸಂಬಂಧ ಬುಧವಾರ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಹಿಂದುಳಿದ ವರ್ಗಗಳ ಸಂಘಟನೆ ಬಲಪಡಿಸಲು ಮುಂದಾಗುವಂತೆ ಎಐಸಿಸಿ ಆದೇಶದಲ್ಲಿ ಸೂಚಿಸಲಾಗಿದೆ.
ಇಷ್ಟು ವರ್ಷಗಳ ಕಾಲ ಜೆಡಿಎಸ್ ನಲ್ಲಿ ಇದ್ದ ಮಧು ಬಂಗಾರಪ್ಪ ಕಳೆದ ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿಯವರಿಂದ ಅಂತರ ಕಾಯ್ದುಕೊಂಡಿದ್ದರು. ಆ ಬಳಿಕ ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ಗೆ ಕರೆ ತಂದಿದ್ದರು. ಆದರೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ದೊರೆತಿಲ್ಲ ಎಂದು ಮಧು ಬಂಗಾರಪ್ಪ ಬೇಸರಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


