ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನ ಇದೆ, ಹಾಗಾಗಿ ಸದನಕ್ಕೆ ಹೋಗುತ್ತಿಲ್ಲ: ಕೆ.ಎಸ್ ಈಶ್ವರಪ್ಪ ಬಹಿರಂಗ ಹೇಳಿಕೆ
ನನಗೆ ಕ್ಲೀನ್ ಚಿಟ್ ಸಿಕ್ಕಿದೆ. ಆದರೆ ಸಚಿವ ಸ್ಥಾನ ಕೊಡುವುದನ್ನು ವಿಳಂಬ ಮಾಡುತ್ತಿದ್ದಾರೆ. ಇದರಿಂದ ನನಗೆ ಅಸಮಾಧಾನ ಆಗಿದೆ. ಹೀಗಾಗಿ ನಾನು ಅಧಿವೇಶನಕ್ಕೆ ಹೋಗುತ್ತಿಲ್ಲ ಎಂದು ಹೇಳಿದ್ದಾರೆ.

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಅವರು ಮತ್ತೆ ಮರಳಿ ಮಂತ್ರಿಯಾಗಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.
ಆದರೆ ಇದಕ್ಕೆ ಸಿಎಂ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸೇರಿದಂತೆ ಹೈಕಮಾಂಡ್ ನಾಯಕರು ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಇದರಿಂದ ಈಶ್ವರಪ್ಪ ಪಕ್ಷದ ನಾಯಕರ ವಿರುದ್ಧ ಬಹಿರಂಗ ಅಸಮಾಧಾನ ಹೊರಹಾಕುತ್ತಿದ್ದಾರೆ. ಅಲ್ಲದೇ ಮಂತ್ರಿ ಸ್ಥಾನ ನೀಡುವುದಕ್ಕೆ ವಿಳಂಬ ಮಾಡುತ್ತಿರುವುದರಿಂದ ಈಶ್ವರಪ್ಪ ಅವರು ಅಧಿವೇಶನಕ್ಕೂ ಗೈರಾಗುತ್ತಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ, ನನಗೆ ಕ್ಲೀನ್ ಚಿಟ್ ಸಿಕ್ಕಿದೆ. ಆದರೆ ಸಚಿವ ಸ್ಥಾನ ಕೊಡುವುದನ್ನು ವಿಳಂಬ ಮಾಡುತ್ತಿದ್ದಾರೆ. ಇದರಿಂದ ನನಗೆ ಅಸಮಾಧಾನ ಆಗಿದೆ. ಹೀಗಾಗಿ ನಾನು ಅಧಿವೇಶನಕ್ಕೆ ಹೋಗುತ್ತಿಲ್ಲ. ಇದನ್ನು ಮುಚ್ಚುಮರೆ ಇಲ್ಲದೇ ಹೇಳುತ್ತೇನೆ ಎಂದು ಹೇಳುವ ಮೂಲಕ ಅಸಮಾಧಾನ ಇರುವುದನ್ನು ಬಹಿರಂಗವಾಗಿಯೇ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


