'ಭಾರತ್ ಜೋಡೋ ಯಾತ್ರೆ'ಗೆ ಕೈ ಜೋಡಿಸುವಂತೆ ಮುನಿಯಪ್ಪಗೆ ಮನವಿ: ಬಿ.ಕೆ ಹರಿಪ್ರಸಾದ್, ಪರಮೇಶ್ವರ್ ಮನವೊಲಿಕೆಗೆ ಬಗ್ಗದ ಮಾಜಿ ಸಂಸದ!
ಕಾಂಗ್ರೆಸ್ ತೊರೆಯಲು ತುದಿಗಾಲಲ್ಲಿ ನಿಂತಿರುವ ಮಾಜಿ ಕೇಂದ್ರ ಸಚಿವ ಕೆ.ಎಚ್ ಮುನಿಯಪ್ಪ ಅವರನ್ನು ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಗೆ ಕೈ ಜೋಡಿಸುವಂತೆ ಮನವೊಲಿಸಲು ಡಾ .ಜಿ ಪರಮೇಶ್ವರ್ ಮತ್ತು ಬಿ,ಕೆ ಹರಿಪ್ರಸಾದ್ ಅವರನ್ನೊಳಗೊಂಡ ನಿಯೋಗ ಭೇಟಿ ಮಾಡಿದೆ.

ಬೆಂಗಳೂರು: ಕಾಂಗ್ರೆಸ್ ತೊರೆಯಲು ತುದಿಗಾಲಲ್ಲಿ ನಿಂತಿರುವ ಮಾಜಿ ಕೇಂದ್ರ ಸಚಿವ ಕೆ.ಎಚ್ ಮುನಿಯಪ್ಪ ಅವರನ್ನು ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಗೆ ಕೈ ಜೋಡಿಸುವಂತೆ ಮನವೊಲಿಸಲು ಡಾ .ಜಿ ಪರಮೇಶ್ವರ್ ಮತ್ತು ಬಿ,ಕೆ ಹರಿಪ್ರಸಾದ್ ಅವರನ್ನೊಳಗೊಂಡ ನಿಯೋಗ ಭೇಟಿ ಮಾಡಿದೆ.
ಕೆಲವು ಕಳೆದ ದಿನಗಳಿಂದ ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲಿ ಮುನಿಯಪ್ಪ ಸಕ್ರಿಯವಾಗಿ ಪಾಲ್ಗೊಳ್ಳುತ್ತಿಲ್ಲ, ಹೀಗಾಗಿ ಭಾರತ್ ಜೋಡೋ ಯಾತ್ರೆಗೆ ಬರುವಂತೆ ಕಾಂಗ್ರೆಸ್ ಮುಖಂಡರು ಮನವೊಲಿಸಲು ಮುಂದಾಗಿದ್ದಾರೆ.
7 ಬಾರಿ ಸಂಸದರಾಗಿರುವ ಮುನಿಯಪ್ಪ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ, ಅವರು ಪಕ್ಷ ತೊರೆಯುತ್ತಾರೆ ಎನ್ನುವುದು ಸುಳ್ಳು ಸುದ್ದಿ, ಕರಾಳ ದಿನಗಳು ಮುಗಿದು ಹೊಸ ಬೆಳಕು ಮೂಡಿದೆ ಎಂದು ಕಾಂಗ್ರೆಸ್ ಮುಖಂಡ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರ ನಾಮನಿರ್ದೇಶನ ಗೊಂದಲದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ನಾಯಕರು ತಮ್ಮನ್ನು ಭೇಟಿ ಮಾಡಿದ್ದಾರೆ ಎಂದು ಮುನಿಯಪ್ಪ ಹೇಳಿದ್ದಾರೆ. ನಾವು ಪಕ್ಷದ ಶಿಸ್ತಿನ ಸಿಪಾಯಿಗಳು, ಹೈಕಮಾಂಡ್ ಮತ್ತು ಸೋನಿಯಾ ಗಾಂಧಿಯವರ ಸೂಚನೆಗಳನ್ನು ಪಾಲಿಸುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಮತ್ತೊಂದು ವಿಕೆಟ್ ಪತನ: 'ಕೈ' ಬಿಟ್ಟು 'ತೆನೆ' ಹೊರಲು ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ ಸಜ್ಜು?
ಮುನಿಯಪ್ಪ ಅವರು ಆರೋಗ್ಯ ಸಚಿವ ಕೆ. ಸುಧಾಕರ್ ಮಧ್ಯಸ್ಥಿಕೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದು ಹಲವು ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿತ್ತು, ಬೊಮ್ಮಾಯಿ ಅವರು ಮುನಿಯಪ್ಪ ಪರವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ಮೂಲವೊಂದು ತಿಳಿಸಿದೆ, ಆದರೆ ಅವರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆಯೇ ಎಂದು ಬಹಿರಂಗಪಡಿಸಲಿಲ್ಲ.
ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಎಸ್ಸಿ (ಎಡ) ಪಕ್ಷಕ್ಕೆ ಸಹಾಯ ಮಾಡುವ ಮುನಿಯಪ್ಪ ಅವರನ್ನೂ ಸೆಳೆಯಲು ಜೆಡಿಎಸ್ ಕೂಡ ಪ್ರಯತ್ನಿಸುತ್ತಿದೆ. ಮುಸ್ಲಿಮರ ಒಂದು ವರ್ಗ ಜೆಡಿಎಸ್ ಪರವಾಗಿದ್ದು, ಇತ್ತೀಚೆಗೆ ಕೋಲಾರದಲ್ಲಿ ನಡೆದ ಸಮುದಾಯದ ಸಮಾವೇಶ ಜನಮನ ಸೆಳೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


