ಒಂದೆಡೆ ಜನತಾ ಜಲಧಾರೆ, ಮತ್ತೊಂದೆಡೆ ಕಣ್ಣೀರಧಾರೆ, ಜೆಡಿಎಸ್ ದೋಣಿಯಲ್ಲಿ ಅಪ್ಪ, ಮಕ್ಕಳು, ಮೊಮ್ಮಕ್ಕಳಷ್ಟೇ ದಡ ಸೇರಬಹುದು, ಮಿಕ್ಕವರು ಮುಳುಗುವುದು ಪಕ್ಕಾ: ಬಿಜೆಪಿ
ಒಂದೆಡೆ ಜನತಾ ಜಲಧಾರೆ, ಮತ್ತೊಂದೆಡೆ ಕಣ್ಣೀರಧಾರೆ, ಜೆಡಿಎಸ್ ದೋಣಿಯಲ್ಲಿ ಅಪ್ಪ, ಮಕ್ಕಳು, ಮೊಮ್ಮಕ್ಕಳಷ್ಟೇ ದಡ ಸೇರಬಹುದು, ಮಿಕ್ಕವರು ಮುಳುಗುವುದು ಪಕ್ಕಾ! ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಬೆಂಗಳೂರು: ಒಂದೆಡೆ ಜನತಾ ಜಲಧಾರೆ, ಮತ್ತೊಂದೆಡೆ ಕಣ್ಣೀರಧಾರೆ, ಜೆಡಿಎಸ್ ದೋಣಿಯಲ್ಲಿ ಅಪ್ಪ, ಮಕ್ಕಳು, ಮೊಮ್ಮಕ್ಕಳಷ್ಟೇ ದಡ ಸೇರಬಹುದು, ಮಿಕ್ಕವರು ಮುಳುಗುವುದು ಪಕ್ಕಾ! ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಕಿಡಿಕಾರಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಒಂದೆಡೆ ಜನತಾ ಜಲಧಾರೆ, ಮತ್ತೊಂದೆಡೆ ಕಣ್ಣೀರಧಾರೆ, ಒಟ್ಟಿನಲ್ಲಿ ನೀರೋ, ನೀರು! ಮುಂದಿನ ಚುನಾವಣೆಯ ನಂತರ ಜೆಡಿಎಸ್ ಪಕ್ಷ ಮುಳುಗಲಿದೆ ಎಂಬುದರ ಸೂಚನೆಯಿದು ಎಂದು ಲೇವಡಿ ಮಾಡಿದೆ.
ಮುಂದಿನ ಚುನಾವಣೆಯಲ್ಲಿ ಕಣ್ಣೀರಿನ ಮೂಲಕವಾದರೂ ಇರುವ 30 ಉಳಿಸಿಕೊಳ್ಳಲು ಜೆಡಿಎಸ್ ಹೆಣಗಾಡುತ್ತಿದೆ. ಹವಾಮಾನ ಇಲಾಖೆ ನೀಡುವ ಮಳೆಯ ಲೆಕ್ಕವಾದರೂ ತಪ್ಪಬಹುದು ಆದರೆ ಚುನಾವಣೆ ಹತ್ತಿರದಲ್ಲಿರುವಾಗ ಜೆಡಿಎಸ್ ನಾಯಕರ ಕಣ್ಣೀರಿನ ಮಳೆಯ ಲೆಕ್ಕ ಎಂದಿಗೂ ತಪ್ಪದು. ಇಲ್ಲದ ಕಣ್ಣೀರು ಒತ್ತರಿಸಿ ಬರುವುದು ಇಲ್ಲಿ ಸಾಮಾನ್ಯ!
ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಶುಭಾಶಯಗಳು. ನಿಮ್ಮ ಜನತಾ ಜಲಧಾರೆ ಕಾರ್ಯಕ್ರಮವನ್ನು ಮೀರಿಸುವ ರೀತಿ ಇನ್ನೊಂದು ಯೋಜನೆ ರೂಪಿಸಿದ್ದೀರಿ. ಜೆಡಿಎಸ್ ಕಣ್ಣೀರಧಾರೆ ಯಶಸ್ವಿಯಾಗಲಿ ಎಂದು ಬಿಜೆಪಿ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


