ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಮಲ್ಲಿಕಾರ್ಜುನ ಖರ್ಗೆ ಗೈರು!
ಬುಧವಾರ ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ರಾಜ್ಯಸಭೆ ಪ್ರತಿಪಕ್ಷದ ನಾಯಕ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸುತ್ತಿಲ್ಲ.

ಬೆಂಗಳೂರು: ರಾಜ್ಯದಲ್ಲಿ ಭಾರೀ ಕುತೂಹಲ ಸೃಷ್ಟಿಸಿರುವ ವಿಪಕ್ಷ ನಾಯಕ ಅವರ 75ನೇ ವರ್ಷದ ಹುಟ್ಟು ಹಬ್ಬದ ಭರ್ಜರಿ ಆಚರಣೆ ಕಾರ್ಯಕ್ರಮದತ್ತ ಎಲ್ಲರ ದೃಷ್ಟಿ ನೆಟ್ಟಿದೆ. ಬುಧವಾರ ದಾವಣಗೆರೆಯಲ್ಲಿ ಲಕ್ಷ ಲಕ್ಷ ಜನರ ಸಮ್ಮುಖದಲ್ಲಿ ಸಿದ್ದರಾಮೋತ್ಸವ ಕಾರ್ಯಕ್ರಮ ನಡೆಯಲಿದೆ.
ಬುಧವಾರ ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ರಾಜ್ಯಸಭೆ ಪ್ರತಿಪಕ್ಷದ ನಾಯಕ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸುತ್ತಿಲ್ಲ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಂಗಳವಾರ ದೇಶದ 12 ಕಡೆಗಳಲ್ಲಿ ದಾಳಿ ನಡೆಸಿರುವ ಬೆಳವಣಿಗೆ ಹಿನ್ನಲೆಯಲ್ಲಿ ಖರ್ಗೆ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಆಗಮಿಸುತ್ತಿಲ್ಲ ಎಂದು ತಿಳಿದುಬಂದಿದೆ.
ಬುಧವಾರದ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಬೇಕಿತ್ತು. ಆದರೆ ದೆಹಲಿಯಲ್ಲಿ ಮಂಗಳವಾರ ನಡೆದ ಬೆಳವಣಿಗೆ ಹಿನ್ನಲೆಯಲ್ಲಿ ಅನಿವಾರ್ಯ ಕಾರಣಕ್ಕಾಗಿ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಖರ್ಗೆ ಭಾಗವಹಿಸುತ್ತಿಲ್ಲ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


