ವರುಣಾ ನಿಮ್ಮನ್ನು ಸಿಎಂ ಮಾಡಿದ ಪುಣ್ಯಕ್ಷೇತ್ರ, ಇಲ್ಲಿಂದಲೇ ಸ್ಪರ್ಧಿಸಿ: ಸಿದ್ದರಾಮಯ್ಯಗೆ ಬೆಂಬಲಿಗರ ಒತ್ತಾಯ
ವರುಣಾ ಕ್ಷೇತ್ರ ಬಿಟ್ಟು ಬೇರೆ ಯಾವ ಕ್ಷೇತ್ರಕ್ಕೂ ನೀವು ಹೋಗಬೇಡಿ. ವರುಣಾ ಕ್ಷೇತ್ರ ನಿಮ್ಮನ್ನು ಸಿಎಂ ಮಾಡಿದ ಪುಣ್ಯಕ್ಷೇತ್ರ. ಹೀಗಾಗಿ ಮತ್ತೆ ವರುಣಾದಿಂದಲೇ ಸ್ಪರ್ದೆ ಮಾಡಿ ಎಂದು ಮನವಿ ಮಾಡಿದ್ದಾರೆ.

ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ವಿಪಕ್ಷ ನಾಯಕ ಸಿದ್ಧರಾಮಯ್ಯ ಸದ್ಯ ಕ್ಷೇತ್ರ ಹುಡುಕಾಟದಲ್ಲಿದ್ದು ಕೋಲಾರ, ಬೆಂಗಳೂರು ಸೇರಿ ಬೇರೆ ಬೇರೆ ಕಡೆಗಳಲ್ಲಿ ಸ್ಪರ್ಧಿಸಲು ಆಹ್ವಾನ ಬಂದಿದೆ. ಆದರೆ ಸಿದ್ಧರಾಮಯ್ಯ ಇನ್ನೂ ಕ್ಷೇತ್ರದ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.
ಈ ಮಧ್ಯೆ ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಮನವಿ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ವರುಣಾ ಕ್ಷೇತ್ರ ಬಿಟ್ಟು ಬೇರೆ ಯಾವ ಕ್ಷೇತ್ರಕ್ಕೂ ನೀವು ಹೋಗಬೇಡಿ. ವರುಣಾ ಕ್ಷೇತ್ರ ನಿಮ್ಮನ್ನು ಸಿಎಂ ಮಾಡಿದ ಪುಣ್ಯಕ್ಷೇತ್ರ. ಹೀಗಾಗಿ ಮತ್ತೆ ವರುಣಾದಿಂದಲೇ ಸ್ಪರ್ಧೆ ಮಾಡಿ ಎಂದು ಮನವಿ ಮಾಡಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರವನ್ನ ಪುತ್ರ ಯತೀಂದ್ರ ಸಿದ್ಧರಾಮಯ್ಯಗೆ ಬಿಟ್ಟುಕೊಟ್ಟು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ಧ ಸಿದ್ಧರಾಮಯ್ಯ ಸೋಲನುಭವಿಸಿ ಬಾದಾಮಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪಕ್ಷ ಆಯೋಜಿಸಿದ್ದ ಆಜಾದಿ ಕಾ ಅಮೃತ ಮಹೋತ್ಸವದಲ್ಲಿ ಭಾಗವಹಿಸಿದ ಅನೇಕ ಕಾಂಗ್ರೆಸ್ಸಿಗರು ವರುಣಾದಿಂದಲೇ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


