ಜೀವ ಬೆದರಿಕೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ಸೂಕ್ತ ಭದ್ರತೆ: ಸಿಎಂ ಬೊಮ್ಮಾಯಿ
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅವರಿಗೆ ಸೂಕ್ತ ಭದ್ರತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅವರಿಗೆ ಸೂಕ್ತ ಭದ್ರತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈ ವಿಚಾರವಾಗಿ ಈಗಾಗಲೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮುಯ್ಯ ಅವರ ಜೊತೆ ಮಾತನಾಡಿದ್ಧೇನೆ. ಅವರಿಗೆ ಜೀವ ಬೆದರಿಗೆ ಇದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ನಿಟ್ಟಿನಲ್ಲಿ ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ, ಸಂಪೂರ್ಣವಾಗಿ ತನಿಖೆ ಮಾಡುತ್ತೇವೆ. ಡಿಜಿ ಅವರ ಬಳಿಯೂ ಮಾತನಾಡಿದ್ದೇನೆ ಎಂದರು.
ಯಾರೂ ಸಹ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಆದರೆ, ಇದು ಎರಡೂ ಕಡೆಯಲ್ಲೂ ನಡೆಯುತ್ತಿದೆ. ಯಾರೂ ಮತ್ತೊಬ್ಬರನ್ನು ಕೆರಳಿಸುವ ಪ್ರಚೋದನಕಾರಿ ಹೇಳಿಕೆ ನೀಡಬಾರದು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಾದ ಸೂಚನೆಯನ್ನು ಎಸ್‌ಪಿಗಳಿಗೂ ನೀಡಲಾಗಿದೆ ಎಂದರು.
ನಿನ್ನೆ ಸಿದ್ದರಾಮಯ್ಯನವರು ಕೊಡಗು ಜಿಲ್ಲಾ ಪ್ರವಾಸದ ವೇಳೆ ಆರಂಭದಲ್ಲಿ ತಿತಿಮತಿಯಲ್ಲಿ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ಇನ್ನು ಕುಶಾಲನಗರ ತಾಲ್ಲೂಕಿನ ಗೊಡ್ಡಹೊಸೂರಿನಲ್ಲಿ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಮಾಡಬೇಕಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


