'ಕೈ' ಕಾರ್ಯಕರ್ತನಾಗಿದ್ದರೆ, ಆತನನ್ನು ಬಿಡಿಸಿದ್ದು ಯಾಕೆ?: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಮತ್ತೆ ಕಿಡಿ
ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದ ಆರೋಪಿ ಕಾಂಗ್ರೆಸ್ ಕಾರ್ಯಕರ್ತ ಎಂಬ ಸುದ್ದಿ ಪ್ರಸಾರವಾಗುತ್ತಲೇ ಈ ಕುರಿತು ಸರಣಿ ಟ್ವೀಟ್ ಮೂಲಕ ಬಿಜೆಪಿಗೆ ಕುಟುಕಿರುವ ಸಿದ್ದರಾಮಯ್ಯ, ಆಪರೇಷನ್ ಕಮಲ' ಎಂದರೆ ಶಾಸಕರಿಗೆ ಮಾತ್ರ ಅಲ್ಲ.. ಈಗ ಬೀದಿ ಪುಂಡರಿಗೂ ಆಪರೇಷನ್ ಕಮಲ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರು: ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದ ಆರೋಪಿ ಕಾಂಗ್ರೆಸ್ ಕಾರ್ಯಕರ್ತ ಎಂಬ ಸುದ್ದಿ ಪ್ರಸಾರವಾಗುತ್ತಲೇ ಈ ಕುರಿತು ಸರಣಿ ಟ್ವೀಟ್ ಮೂಲಕ ಬಿಜೆಪಿಗೆ ಕುಟುಕಿರುವ ಸಿದ್ದರಾಮಯ್ಯ, ಆಪರೇಷನ್ ಕಮಲ' ಎಂದರೆ ಶಾಸಕರಿಗೆ ಮಾತ್ರ ಅಲ್ಲ.. ಈಗ ಬೀದಿ ಪುಂಡರಿಗೂ ಆಪರೇಷನ್ ಕಮಲ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಈ ಕುರಿತ ಸರಣಿ ಟ್ವೀಟ್ ನಲ್ಲಿ ಬಿಜೆಪಿ ವಿರುದ್ಧ ಕಿಡಿಕಾರಿರುವ ಸಿದ್ದರಾಮಯ್ಯ, 'ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಯಾಕೆ ಬರಬೇಕಾಗಿತ್ತು? ಕಾಂಗ್ರೆಸ್‌ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ?.. 'ಆಪರೇಷನ್ ಕಮಲ' ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ 'ಆಪರೇಷನ್ ಕಮಲ' ಕೂಡಾ ಬಿಜೆಪಿ ನಡೆಸುತ್ತದೆ ಎಂದು ಮಡಿಕೇರಿಯಲ್ಲಿ ಸಾಬೀತಾಗಿದೆ ಎಂದು ಹೇಳಿದ್ದಾರೆ.
ಅಂತೆಯೇ ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ ಬಿಜೆಪಿ ಎಂದು ಕಿಡಿಕಾರಿದ್ದಾರೆ.
ಈ ಹಿಂದೆ ಮೊಟ್ಟೆ ಎಸೆದ ಆರೋಪಿ ಸಂಪತ್ ವಿಡಿಯೋದಲ್ಲಿ ತಾನು, ನಾನು ಕಾಂಗ್ರೆಸ್ ಕಾರ್ಯಕರ್ತನೆ, ಕಾಂಗ್ರೆಸ್ನಲ್ಲಿ ಹಿಂದೂಗಳಿಲ್ವಾ? ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಂದೂಗಳೂ ದನದ ಮಾಂಸ ತಿಂತಾರೆ ಅಂದಿದ್ದು ತಪ್ಪಲ್ವಾ? ಹಿಂದೂ ವಿರೋಧಿ ಹೇಳಿಕೆಯಿಂದ ನೋವಾಗಿತ್ತು. ಹೀಗಾಗಿ ಮೊಟ್ಟೆ ಹೊಡೆದೆ ಎಂದು ಹೇಳಿಕೆ ನೀಡಿದ್ದ. ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದ್ದಂತೆಯೇ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


