ರಾಜಕೀಯ

ಬಿಜೆಪಿಯೇ ನನ್ನ ಕುಟುಂಬ: ಹೊಸ ಪ್ರಾದೇಶಿಕ ಪಕ್ಷ ಸ್ಥಾಪನೆ ವಿಚಾರಕ್ಕೆ ತೆರೆ ಎಳೆದ ಗಾಲಿ ಜನಾರ್ಧನ ರೆಡ್ಡಿ

ಭಾರತೀಯ‌ ಜನತಾ ಪಕ್ಷವೇ ನನ್ನ ರಾಜಕೀಯ ಜೀವನವಾಗಿದೆ. ಕಳೆದ 30 ವರ್ಷಗಳಿಂದ ಭಾಜಪವೇ ನನ್ನ ಕುಟುಂಬ, ಲಾಲ್ ಕೃಷ್ಣ ಅಡ್ವಾಣಿ ಮತ್ತು ರಾಮಮಂದಿರ ಕಾರಣದಿಂದ ಎಮೋಷನಲ್ ಆಗಿ ರಾಜಕೀಯಕ್ಕೆ ಬಂದಿದ್ದೇನೆ. ನನ್ನ ವಿಚಾರದಲ್ಲಿ ಪಕ್ಷದ ಹಿರಿಯರು‌ ಏನು ತೀರ್ಮಾನ ಮಾಡುತ್ತಾರೆ...

ಬಿಜೆಪಿಯೇ ನನ್ನ ಕುಟುಂಬ: ಹೊಸ ಪ್ರಾದೇಶಿಕ ಪಕ್ಷ ಸ್ಥಾಪನೆ ವಿಚಾರಕ್ಕೆ ತೆರೆ ಎಳೆದ ಗಾಲಿ ಜನಾರ್ಧನ ರೆಡ್ಡಿ
ಜನಾರ್ಧನ ರೆಡ್ಡಿ
Published On :

ಗದಗ: ಭಾರತೀಯ‌ ಜನತಾ ಪಕ್ಷವೇ ನನ್ನ ರಾಜಕೀಯ ಜೀವನವಾಗಿದೆ. ಕಳೆದ 30 ವರ್ಷಗಳಿಂದ ಭಾಜಪವೇ ನನ್ನ ಕುಟುಂಬ, ಲಾಲ್ ಕೃಷ್ಣ ಅಡ್ವಾಣಿ ಮತ್ತು ರಾಮಮಂದಿರ ಕಾರಣದಿಂದ ಎಮೋಷನಲ್ ಆಗಿ ರಾಜಕೀಯಕ್ಕೆ ಬಂದಿದ್ದೇನೆ. ನನ್ನ ವಿಚಾರದಲ್ಲಿ ಪಕ್ಷದ ಹಿರಿಯರು‌ ಏನು ತೀರ್ಮಾನ ಮಾಡುತ್ತಾರೆ ಎಂಬುದನ್ನು ನೋಡುತ್ತಿದ್ದೇನೆ ಎಂದು ಹೇಳುವ ಮೂಲಕ ಹೊಸ ಪ್ರಾದೇಶಿಕ ಪಕ್ಷ ಸ್ಥಾಪನೆ ವಿಚಾರಕ್ಕೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ತೆರೆ ಎಳೆದಿದ್ದಾರೆ.

ನಗರದ ಐತಿಹಾಸಿಕ ಭೀಷ್ಮಕೆರೆಯಲ್ಲಿರುವ 116 ಅಡಿ ಎತ್ತರದ ಬಸವೇಶ್ವರ ಪ್ರತಿಮೆಯನ್ನು ಮಂಗಳವಾರ ವೀಕ್ಷಿಸಿ ಮಾತನಾಡಿದ ಅವರು, 12 ವರ್ಷಗಳ ಕಾಲ ನಾನು ಮನೆಯಲ್ಲಿ ಇದ್ದೆ. ಮಕ್ಕಳ ಶಿಕ್ಷಣ, ಮದುವೆ ಎಲ್ಲವೂ ಅಯಿತು. ಮನೆಯಲ್ಲಿ ಕುಳಿತುಕೊಳ್ಳೋ ವಯಸ್ಸೂ ನನ್ನದಲ್ಲ. ಸಾರ್ವಜನಿಕ ಬದುಕಲ್ಲಿ ಬರಬೇಕೆನ್ನುವುದು ನನ್ನ ಸ್ಪಷ್ಟ ತೀರ್ಮಾನ. ಹೀಗಾಗಿ ನಾನು ಗಂಗಾವತಿಯನ್ನು ಆಯ್ಕೆ ಮಾಡಿಕೊಂಡಿದ್ದೇನೆ ಎಂದು ಹೇಳಿದರು.

ಶ್ರೀರಾಮುಲು ಜತೆ ಭಿನ್ನಾಭಿಪ್ರಾಯದ ಬಗ್ಗೆ ಪ್ರತಿಕ್ರಿಯಿಸಿ, ಶ್ರೀರಾಮುಲು ಮತ್ತು ಜನಾರ್ದನರೆಡ್ಡಿ ನಡುವೆ ಬಿರುಕು ಎಂಬುವುದು ಕನಸು, ನಮ್ಮ ನಡುವೆ ಯಾವತ್ತೂ‌ ಬಿರುಕು‌ ಎಂಬ ಪ್ರಶ್ನೆಯೇ ಬರುವುದಿಲ್ಲ. ಬೇರೆ ರಾಜಕೀಯ ವಿಚಾರಗಳನ್ನು ಹೇಳಲು ಇದು ಸರಿಯಾದ ಸಮಯವಲ್ಲ. ನಾನು ಯಾವ ಮಾರ್ಗದಲ್ಲಿ ಹೋಗುವುದು ಬಿಡುವುದು ಎಂಬುವುದು ಬಸವೇಶ್ವರನಿಗೆ ಬಿಟ್ಟದ್ದು ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.