ರಾಜಕೀಯ

ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಬೆಂಬಲಿತ ಒಕ್ಕಲಿಗ ಮತದಾರರ ಹೆಸರು ಡಿಲೀಟ್: ಸಂಸದ ಡಿ.ಕೆ  ಸುರೇಶ್ ದೂರು

ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಒಕ್ಕಲಿಗ ಸಮುದಾಯದ ಮತದಾರರನ್ನು ಗುರಿಯಾಗಿಸಿಕೊಂಡು ಡಿಲೀಟ್ ಮಾಡಲಾಗಿದೆ ಎಂದು ಸಂಸದ ಡಿ.ಕೆ.ಸುರೇಶ್ ಆರೋಪಿಸಿದ್ದಾರೆ.

ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಬೆಂಬಲಿತ ಒಕ್ಕಲಿಗ ಮತದಾರರ ಹೆಸರು ಡಿಲೀಟ್: ಸಂಸದ ಡಿ.ಕೆ  ಸುರೇಶ್ ದೂರು
ಚುನಾವಣಾ ಆಯೋಗಕ್ಕೆ ಸುರೇಶ್ ದೂರು
Published On :

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಒಕ್ಕಲಿಗ ಸಮುದಾಯದ ಮತದಾರರನ್ನು ಗುರಿಯಾಗಿಸಿಕೊಂಡು ಡಿಲೀಟ್ ಮಾಡಲಾಗಿದೆ ಎಂದು ಸಂಸದ ಡಿ.ಕೆ.ಸುರೇಶ್ ಆರೋಪಿಸಿದ್ಜಾರೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬುಧವಾರ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಮತದಾರರ ಪರಿಷ್ಕರಣೆಯಲ್ಲಿ ವ್ಯಾಪಾಕ ಅಕ್ರಮ ನಡೆದಿದೆ.

ಈ ಸಂಬಂಧ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಹಲವು ಕಾನೂನು ಬಾಹಿರ ಚಟುವಟಿಕೆಗಳು ಬೆಳಕಿಗೆ ಬಂದಿವೆ. ಅದರಲ್ಲೂ, ಕಾಂಗ್ರೆಸ್ ಪಕ್ಷದ ಬೆಂಬಲಿತ ಮತದಾರರು, ಒಕ್ಕಲಿಗ ಸಮುದಾಯದವರನ್ನು ಗುರಿಯಾಗಿಸಿ ಕೊಂಡು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಹೇಳಿದರು.

ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿಯೇ ಕಳೆದ ವಿಧಾನಸಭಾ ಚುನಾವಣೆಯಿಂದ ನ.9ರವರೆಗೆ ಅನಧಿಕೃತವಾಗಿ ಸುಮಾರು 1.30 ಲಕ್ಷ ಮತಗಳ ಸೇರ್ಪಡೆಯಾಗಿದ್ದು, 75 ಸಾವಿರ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದ ಅವರು, ಈ ಸಂಬಂಧ ಉನ್ನತ ಮಟ್ಟದಲ್ಲಿ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಹಳಷ್ಟು ನಕಲಿ ಮತಗಳ ಸೇರ್ಪಡೆಯಾಗಿದ್ದು, ನಾವು ಸ್ಥಳ ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಖಾಲಿ ನಿವೇಶನ ಹಾಗೂ ಖಾಲಿ ಮನೆಗಳಲ್ಲಿ ಸಾವಿರಾರು ಮತದಾರರ ಹೆಸರು ಸೇರ್ಪಡೆಯಾಗಿವೆ. ಚಿಲುಮೆ ಎಂಬ ಸಂಸ್ಥೆ ಮೂಲಕ ಬೆಂಗಳೂರಿನಲ್ಲಿ ಬಿಜೆಪಿ ನಾಯಕರು, ಮಂತ್ರಿಗಳು, ಶಾಸಕರು ಮತಪಟ್ಟಿ ಪರಿಷ್ಕರಣೆ ಹೆಸರಲ್ಲಿ ಭಾರಿ ಅಕ್ರಮ ಮಾಡಿದ್ದಾರೆ ಎಂದು ಆಪಾದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.