ರಾಜಕೀಯ

ಗುಜರಾತ್ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ‌ಬೀರುವುದಿಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ಗುಜರಾತ್‌ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಕರ್ನಾಟಕದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು.

ಗುಜರಾತ್ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ‌ಬೀರುವುದಿಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :

ಮೈಸೂರು: ಗುಜರಾತ್‌ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಕರ್ನಾಟಕದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು.

ಗುಜರಾತ್ ರಾಜ್ಯ ಚುನಾವಣಾ ಫಲಿತಾಂಶ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿನ ಚುನಾವಣಾ ಫಲಿತಾಂಶವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.

ಅಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂಬ ನಿರೀಕ್ಷೆ ಇತ್ತು. ಆಮ್ ಆದ್ಮಿ ಪಕ್ಷದವರು ಸ್ಪರ್ಧೆ ಮಾಡಿ ಕಾಂಗ್ರೆಸ್ ಮತಗಳನ್ನು ತಿಂದರು. ಆ ಪಕ್ಷದವರು ಪಡೆದ ಮತಗಳೆಲ್ಲ ಕಾಂಗ್ರೆಸ್‌ನದ್ದೇ' ಎಂದು ತಿಳಿಸಿದರು.

ಒಂದು ರಾಜ್ಯದ ಚುನಾವಣಾ ಫಲಿತಾಂಶದ ಗಾಳಿ ಮತ್ತೊಂದು ರಾಜ್ಯಕ್ಕೆ ಬೀಸುವುದಿಲ್ಲ. ಇಲ್ಲಿನ ಬಿಜೆಪಿ ಸರ್ಕಾರ ಅತಿ ಭ್ರಷ್ಟ ಸರ್ಕಾರ. ಕಾಂಗ್ರೆಸ್ ಸಂಘಟನೆ ಇಲ್ಲಿ ಶಕ್ತಿಯುತವಾಗಿದೆ. ಗುಜರಾತ್‌ಗೆ ಹೋಲಿಸಬಾರದು. ಕರ್ನಾಟಕದಲ್ಲಿ ಸೋಲುತ್ತೇವೆ ಎಂಬುದು ಬಿಜೆಪಿಯವರಿಗೂ ಗೊತ್ತಿದೆ' ಎಂದರು.

'ಹಿಮಾಚಲ ಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಇತ್ತು. ಅದೇ ಕಾಂಗ್ರೆಸ್‌ಗೆ ಪ್ಲಸ್ ಪಾಯಿಂಟ್ ಆಗಿದೆ. 'ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷ ಬಹಳ ಹಣ ಖರ್ಚು ಮಾಡಿತು. ಬಿಜೆಪಿಯವರೇ ಆ ಪಕ್ಷಕ್ಕೆ ಹಣ ನೀಡಿದ್ದಾರೆ.  ಕಾಂಗ್ರೆಸ್ ಮತ ವಿಭಜನೆಗಾಗಿ ಆಮ್ ಆದ್ಮಿ ಪಕ್ಷಕ್ಕೆ ಬಿಜೆಪಿ ಹಣ ನೀಡಿದೆ' ಎಂದು ಆರೋಪಿಸಿದರು.

'ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಇಲ್ಲಿ ಬಿಜೆಪಿ ತಂತ್ರಗಾರಿಕೆ ಮಾಡಬಹುದು. ಆದರೆ, ಅದು ನಡೆಯುವುದಿಲ್ಲ. ಕರ್ನಾಟಕದ ಆಡಳಿತ ಪರಿಸ್ಥಿತಿ ಬಹಳ ಕೆಟ್ಟದಾಗಿದೆ. 'ಅಷ್ಟು ದುಡ್ಡು ಖರ್ಚು ಮಾಡಿದರೂ ಆಮ್ ಆದ್ಮಿ ಪಕ್ಷ 6 ಸ್ಥಾನ ಪಡೆದಿದೆ. ಅವರಿಂದ ಮತ ವಿಭಜನೆಯಾಗಿದೆ' ಎಂದು ಆರೋಪಿಸಿದರು.

'ಕರ್ನಾಟಕದಲ್ಲಿ ಕಾಂಗ್ರೆಸ್ ಸುಮ್ಮನೆ ಇದ್ದರೂ ಗೆಲ್ಲುತ್ತದೆ. ನಾವು ಯಾವುದೇ ತಂತ್ರಗಾರಿಕೆ ಮಾಡುವುದೇ ಬೇಡ. ಮೋದಿ ಹವಾ ಎಲ್ಲೂ ಇಲ್ಲ. ಹವಾ ಇದ್ದಿದ್ದರೆ ದೆಹಲಿಯಲ್ಲೇ ಸೋಲುತ್ತಿದ್ದರೇಕೆ. ಎಲ್ಲಿ ಹೋಯಿತು ಮೋದಿ ಹವಾ?' ಎಂದು ವ್ಯಂಗ್ಯವಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.