ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಭೇಟಿ ಮಾಡಿದ ತಕ್ಷಣ ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದಲ್ಲ: ವಿಶ್ವನಾಥ್ ಸ್ಪಷ್ಟನೆ
ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಭೇಟಿ ಮಾಡಿದ ತಕ್ಷಣ ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದಲ್ಲ.. ಭೇಟಿ ಹಿಂದೆ ರಾಜಕೀಯ ಉದ್ದೇಶ ಇಲ್ಲ ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಹೇಳಿದ್ದಾರೆ.

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಭೇಟಿ ಮಾಡಿದ ತಕ್ಷಣ ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದಲ್ಲ.. ಭೇಟಿ ಹಿಂದೆ ರಾಜಕೀಯ ಉದ್ದೇಶ ಇಲ್ಲ ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಹೇಳಿದ್ದಾರೆ.
ಚನ್ನಪಟ್ಟಣ ತಾಲ್ಲೂಕಿನ ಸಿಂಗರಾಜಿಪುರದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಸೌಜನ್ಯಯುತವಾಗಿದ್ದು, ಅದರಲ್ಲಿ ರಾಜಕೀಯ ಉದ್ದೇಶ ಇಲ್ಲ. ನಾನು ಯಾವುದೇ ಟಿಕೆಟ್ ಆಕಾಂಕ್ಷಿ ಅಲ್ಲ ಎಂದು ಸ್ಪಷ್ಟಪಡಿಸಿದರು.
‘ನಮ್ಮ ರಾಜ್ಯದ ಖರ್ಗೆಯವರು ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಅಂತೆಯೇ, ಸಿದ್ದರಾಮಯ್ಯ ಅವರು ಆಪರೇಷನ್ ಮಾಡಿಸಿಕೊಂಡಿದ್ದು ಈ ಕಾರಣಕ್ಕೆ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದೇನೆ. ಅವರನ್ನು ಭೇಟಿ ಮಾಡಿದ ತಕ್ಷಣಕ್ಕೆ ಕಾಂಗ್ರೆಸ್‌ಗೆ ಹೋಗುತ್ತೇನೆ ಎನ್ನಲು ಆಗುವುದಿಲ್ಲ. ನಾನು ಇವತ್ತಿಗೂ ಬಿಜೆಪಿಯಲ್ಲೇ ಇದ್ದೇನೆ. ನನಗೀಗ 75 ವರ್ಷ ಆಗಿದೆ. ಶಾಸಕನಾಗಿ ಎಲ್ಲ ಮಜಲುಗಳನ್ನು ನೋಡಿದ್ದೇನೆ. ಯುವಕರಿಗೆ ಟಿಕೆಟ್ ನೀಡಲಿ. ನಾವು ಸಂಘಟನೆ ಮಾಡುತ್ತೇವೆ’ ಎಂದರು.
ಇದನ್ನೂ ಓದಿ: ಖರ್ಗೆ ಭೇಟಿ ಬೆನ್ನಲ್ಲೇ ಸಿದ್ದರಾಮಯ್ಯ ಭೇಟಿಯಾದ ಎಚ್ ವಿಶ್ವನಾಥ್, ಕುತೂಹಲ ಮೂಡಿಸಿದ 'ಹಳ್ಳಿ ಹಕ್ಕಿ' ನಡೆ
ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಅವರು ‘ ಹಿಂದೆಲ್ಲ ಕಾಂಗ್ರೆಸ್ ಎಲ್ಲ ಕಡೆ ಅಧಿಕಾರಕ್ಕೆ ಬರುತ್ತಿತ್ತು. ಈಗ ಕಾಲ, ನಾಯಕತ್ವ ಎಲ್ಲವೂ ಬದಲಾಗಿದೆ. ಸಂಘಟನಾ ಚತುರತೆ ಬದಲು ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ರಾಹುಲ್ ಗಾಂಧಿ ಸಹ ಭಾರತ್ ಜೋಡೊ ಮೂಲಕ ಸಾಗುತ್ತಿರುವುದು ಒಳ್ಳೆಯ ಬೆಳವಣಿಗೆ. ಎಲ್ಲ ಪಕ್ಷಗಳ ಸಿದ್ದಾಂತವನ್ನು ಜನರು ಒಪ್ಪುತ್ತಾರೆ. ಆದರೆ ಪಕ್ಷ ನಡೆಸುವ ನಾವಿಕನ ಎಡವಟ್ಟಿನಿಂದ ವಿರೋಧ ಪಕ್ಷದಲ್ಲಿ ಕೂರಬೇಕಾಗುತ್ತದೆ’ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


