ರಾಜಕೀಯ

ಬಿಜೆಪಿ ಫ್ಲೆಕ್ಸ್‌ನಲ್ಲಿ ರಾರಾಜಿಸುತ್ತಿರುವ 'ಸ್ವಾಭಿಮಾನಿ' ಸಂಸದೆ: ಕಮಲ ಪಾಳಯ ಸೇರುವ ಸುಳಿವು ನೀಡಿದ್ರಾ ಸುಮಲತಾ ಅಂಬರೀಷ್?

ಸಕ್ಕರೆ ನಾಡು ಮಂಡ್ಯ ಗೆ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆ ಮಂಡ್ಯ ನಗರವನ್ನು ಬಿಜೆಪಿ ಮುಖಂಡರು ಕೇಸರಿ ಮಯವಾಗಿ ಮಾಡಿದ್ದಾರೆ.

ಬಿಜೆಪಿ ಫ್ಲೆಕ್ಸ್‌ನಲ್ಲಿ ರಾರಾಜಿಸುತ್ತಿರುವ 'ಸ್ವಾಭಿಮಾನಿ' ಸಂಸದೆ: ಕಮಲ ಪಾಳಯ ಸೇರುವ ಸುಳಿವು ನೀಡಿದ್ರಾ ಸುಮಲತಾ ಅಂಬರೀಷ್?
ಬಿಜೆಪಿ ಫ್ಲೆಕ್ಸ್ ನಲ್ಲಿ ಸುಮಲತಾ
Published On :

ಮಂಡ್ಯ: ಸಕ್ಕರೆ ನಾಡು ಮಂಡ್ಯ ಗೆ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆ ಮಂಡ್ಯ ನಗರವನ್ನು ಬಿಜೆಪಿ ಮುಖಂಡರು ಕೇಸರಿ ಮಯವಾಗಿ ಮಾಡಿದ್ದಾರೆ. ಜೊತೆಗೆ ಅಮಿತ್ ಶಾ ಅವರನ್ನು ಸ್ವಾಗತಿಸಿ ಹಾಕಿದ ಫ್ಲೆಕ್ಸ್ ನಲ್ಲಿ ಸ್ವಾಭಿಮಾನಿ ಸಂಸದೆ ಸುಮಲತಾ ಅಂಬರೀಶ್  ಫೋಟೋ ರಾರಾಜಿಸುತ್ತಿದೆ.

ರಸ್ತೆಯ ಇಕ್ಕೆಲಗಳಲ್ಲಿ ಬಿಜೆಪಿ ಬಾವುಟ ಹಾರಾಡುತ್ತಿದ್ದು, ನಾಯಕರು ಅಮಿತ್ ಶಾಗೆ ಸ್ವಾಗತ ಕೋರುವ ಫ್ಲೆಕ್ಸ್ ಗಳು ಕೂಡ ರಾರಾಜಿಸುತ್ತಿವೆ. ಅಮಿತ್ ಶಾ ಗೆ ಸ್ವಾಗತ ಕೋರಿದ ಫ್ಲೆಕ್ಸ್ ನಲ್ಲಿ ಸ್ವಾಭಿಮಾನಿ ಸಂಸದೆ ಸುಮಲತಾ ಭಾವಚಿತ್ರವಿರುವುದು ಗಮನಸೆಳೆದಿದೆ.

ಬಿಜೆಪಿ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ವೇದಿಕೆ ಹಂಚಿಕೊಳ್ತಾರಾ ಮಂಡ್ಯ ಸಂಸದೆ ಸುಮಲತಾ, ಇಂತಹದೊಂದು ಪ್ರಶ್ನೆ ಇದೀಗ ಮಂಡ್ಯ ಜಿಲ್ಲೆಯಲ್ಲಿ ಹರಿದಾಡುತ್ತಿದೆ. ಇದರ ಜೊತೆಗೆ ಶೀಘ್ರದಲ್ಲೇ ಸುಮಲತಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸಂಸದೆ ಸುಮಲತಾ ಅವರ ಆಪ್ತ ಇಂಡವಾಳು ಸಚ್ಚಿದಾನಂದ ಈಗಾಗಲೇ ಬಿಜೆಪಿ ಸೇರಿದ್ದಾರೆ. ಸುಮಲತಾ ಅನುಮತಿ ಪಡೆದೆ ಬಿಜೆಪಿ ಸೇರಿರುವುದಾಗಿ ಸಚ್ಚಿದಾನಂದ ಹೇಳಿದ್ದರು. ಇದೀಗ ಆಪ್ತ ಕೋರಿರುವ ಫ್ಲೆಕ್ಸ್‌ನಲ್ಲಿ ಸುಮಲತಾ ಅವರ ಫೋಟೋ ರಾರಾಜಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.