ರಾಜಕೀಯ

ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಬೆಂಗಳೂರಿಗೆ ಆಗಮನ

ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಭಾನುವಾರ ಬೆಂಗಳೂರಿಗೆ ಆಗಮಿಸಿದರು.

ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಬೆಂಗಳೂರಿಗೆ ಆಗಮನ
ದ್ರೌಪದಿ ಮುರ್ಮು
Published On :

ಬೆಂಗಳೂರು: ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ  ದ್ರೌಪದಿ ಮುರ್ಮು ಅವರು ಭಾನುವಾರ ಬೆಂಗಳೂರಿಗೆ ಆಗಮಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದ್ರೌಪದಿ ಮುರ್ಮು ಅವರನ್ನು ಆತ್ಮೀಯವಾಗಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ನಗರಾಭಿವೃದ್ಧಿ ಸಚಿ ಬಸವರಾಜ್ ಬೈರತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿರೋಧ ಪಕ್ಷಗಳ ಅಭ್ಯರ್ಥಿಯಾಗಿರುವ ಯಶವಂತ್ ಸಿನ್ಹಾ ಅವರು, ಕೆಲವು ದಿನಗಳ ಹಿಂದೆ ಬೆಂಗಳೂರಿಗೆ ಆಗಮಿಸಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಬೆಂಬಲಿಸುವಂತೆ ಮನವಿ ಮಾಡಿದ್ದರು.

ರಾಷ್ಟ್ರಪತಿ ಹುದ್ದೆಗೆ ಜುಲೈ 18 ರಂದು ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಫಲಿತಾಂಶ ಹೊರಬೀಳಲಿದೆ. ಈ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ಅವರು ತಮ್ಮನ್ನು ಬೆಂಬಲಿಸುವಂತೆ ಕೋರಿ ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ನಾಯಕರಲ್ಲಿ ಮನವಿ ಮಾಡಲು ಬೆಂಗಳೂರಿಗೆ ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.