ಬಿಜೆಪಿಯ ಕುತಂತ್ರಗಳಿಗೆ ಸೋನಿಯಾ- ರಾಹುಲ್ ಗಾಂಧಿ ಬಲಿಪಶು: ಡಿಕೆ ಶಿವಕುಮಾರ್
ಸೋನಿಯಾ ಗಾಂಧಿ ಮತ್ತು ಅವರ ಕುಟುಂಬ ದೇಶಕ್ಕಾಗಿ ಅಪಾರ ತ್ಯಾಗ ಮಾಡಿದ್ದಾರೆ. “ಸುಳ್ಳು ಪ್ರಕರಣದಲ್ಲಿ ಸೋನಿಯಾ ಮತ್ತು ರಾಹುಲ್ಗೆ ಚಿತ್ರಹಿಂಸೆ ನೀಡುವುದು ಅಮಾನವೀಯ. ಬಿಜೆಪಿ ಬೆದರಿಕಗೆ ಬಗ್ಗುವುದಿಲ್ಲ ಎಂದು ಶಿವಕುಮಾರ್ ತಿಳಿಸಿದ್ದಾರೆ.

ಹುಬ್ಬಳ್ಳಿ: ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ, ಧಾರವಾಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹುಬ್ಬಳ್ಳಿಯಲ್ಲಿ ಶುಕ್ರವಾರ ಡಾ ಬಿಆರ್ ಅಂಬೇಡ್ಕರ್ ವೃತ್ತದಿಂದ ಚನ್ನಮ್ಮ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸ್ಟೇಷನ್ ರಸ್ತೆಯಲ್ಲಿರುವ ಡಾ ಬಿಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಚನ್ನಮ್ಮ ವೃತ್ತದವರೆಗೆ ನಡೆಯಲಿರುವ ಮೆರವಣಿಗೆಗೆ ಚಾಲನೆ ನೀಡಿದರು. ಪಕ್ಷದ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ನಂತರ ಡಿಕೆ ಶಿವಕುಮಾರ್ ಮಾತನಾಡಿದರು.
ಜಾರಿ ನಿರ್ದೇಶನಾಲಯ ಹಾಗೂ ಐಟಿ ಮೂಲಕ ಕಾಂಗ್ರೆಸ್ ನಾಯಕರನ್ನು ಹೆದರಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಸಹ. ಅದೊಂದು ಟ್ರಸ್ಟ್, ಅದಕ್ಕೆ ಸೋನಿಯಾ ಗಾಂಧಿ ಅವರು ಸಹ ಟ್ರಸ್ಟಿ ಇದ್ದರು. ಅಂದ ಮಾತ್ರಕ್ಕೆ ಅವರು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದರೇ ಹೇಗೆ. ಇದೊಂದು ಸೇಡಿನ ರಾಜಕಾರಣ ಮಾಡುವುದು ಸರಿಯಲ್ಲ. ದೇಶಕ್ಕೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡ ಪಕ್ಷ ಕಾಂಗ್ರೆಸ್ ಎಂದರು.
ಸೋನಿಯಾ ಗಾಂಧಿ ಮತ್ತು ಅವರ ಕುಟುಂಬ ದೇಶಕ್ಕಾಗಿ ಅಪಾರ ತ್ಯಾಗ ಮಾಡಿದ್ದಾರೆ. “ಸುಳ್ಳು ಪ್ರಕರಣದಲ್ಲಿ ಸೋನಿಯಾ ಮತ್ತು ರಾಹುಲ್ಗೆ ಚಿತ್ರಹಿಂಸೆ ನೀಡುವುದು ಅಮಾನವೀಯ. ಬಿಜೆಪಿ ಬೆದರಿಕಗೆ ಬಗ್ಗುವುದಿಲ್ಲ ಎಂದು ಶಿವಕುಮಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


