ರಾಜಕೀಯ

ರಾಜಕೀಯದಲ್ಲಿ ಬೆಳೆಯುವ ಎಲ್ಲ ಅವಕಾಶಗಳನ್ನು ಸಿದ್ದರಾಮಯ್ಯ ಶಾಶ್ವತವಾಗಿ ತಡೆದರು: ಮೋಟಮ್ಮ!

ವಿಧಾನಸಭೆ ಸ್ಪೀಕರ್ ಹಾಗೂ ಮತ್ತೆ ಸಚಿವೆಯಾಗುವ ಅವಕಾಶಕ್ಕೆ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ತಣ್ಣೀರೆರಚಿದರು ಎಂದು ಮೋಟಮ್ಮ ಆತ್ಮಚರಿತ್ರೆಯಲ್ಲಿ ಬರೆದುಕೊಂಡಿದ್ದಾರೆ.

ರಾಜಕೀಯದಲ್ಲಿ ಬೆಳೆಯುವ ಎಲ್ಲ ಅವಕಾಶಗಳನ್ನು ಸಿದ್ದರಾಮಯ್ಯ ಶಾಶ್ವತವಾಗಿ ತಡೆದರು: ಮೋಟಮ್ಮ!
ಮೋಟಮ್ಮ ಆತ್ಮಚರಿತ್ರೆ
Published On :

ಚಿಕ್ಕಮಗಳೂರು: ಸಬ್ ರಿಜಿಸ್ಟ್ರಾರ್ ಆಗಿ ಕೆಲಸ ಮಾಡುತ್ತಿದ್ದ ದಲಿತ ಮಹಿಳೆ ರಾಜಕೀಯ ಕ್ಷೇತ್ರಕ್ಕೆ ಧುಮುಕುವುದು ಮತ್ತು ಕಾಂಗ್ರೆಸ್ ಪಕ್ಷದ ಉನ್ನತ ಸ್ಥಾನಕ್ಕೇರುವುದು ಅಷ್ಟು ಸುಲಭವಾಗಿರಲಿಲ್ಲ. ಆಗಿನ ಪ್ರಧಾನಿ ದಿವಂಗತ ಇಂದಿರಾಗಾಂಧಿ ಹೊರತುಪಡಿಸಿ ಬೇರೆಯವರ ಮೇಲೆ ಪ್ರಭಾವ ಬೀರುವುದು ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯೆಯಾಗಿ ಕೆಲಸ ಮಾಡುವುದು ಸರಳವಾಗಿರಲಿಲ್ಲ ಎಂದು ಮಾಜಿ ಸಚಿವೆ ಮೋಟಮ್ಮ ತಮ್ಮ ಆತ್ಮ ಚರಿತ್ರೆಯಲ್ಲಿ ಬರೆದುಕೊಂಡಿದ್ದಾರೆ.

ದಲಿತ ಮಹಿಳಾ ರಾಜಕಾರಣಿಯೂ ಆಗಿ ರಾಜ್ಯಭಾರ ಮಾಡಬಲ್ಲರು ಎಂಬುದನ್ನು ಮೂಡಿಗೆರೆಯ ಮೋಟಮ್ಮ ಸಾಬೀತುಪಡಿಸಿದರು. ಅವರು ಸಚಿವರಾಗಿ, ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕಿ ಮತ್ತು ಎಂಎಡಿಬಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಹಾಗೂ ಮಹಿಳಾ ಸಬಲೀಕರಣ ಯೋಜನೆಯಡಿ ಮಹಿಳಾ ಗುಂಪುಗಳನ್ನು ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಆದರೆ ಸತತ ಸೋಲಿನ ನಂತರ, ಅವರು ಜನಮನದಿಂದ ದೂರ ಸರಿದರು 'ಬಿದಿರು, ನೀನ್ಯಾರಿಗಲ್ಲದವಳು' ಎಂಬ ಶೀರ್ಷಿಕೆಯಡಿ ತಮ್ಮ ಆತ್ಮಚರಿತ್ರೆ ಬರೆದಿದ್ದಾರೆ. ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ಈ ಪುಸ್ತಕ ಬಿಡುಗಡೆ ಮಾಡಿದರು. ತಮ್ಮ ಧ್ವನಿಯನ್ನು "ಮೌನಗೊಳಿಸಲು" ಕಾರಣವಾದ ಕಾಂಗ್ರೆಸ್ ನಾಯಕರ ಬಗ್ಗೆ ಪುಸ್ತಕದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆ ಸ್ಪೀಕರ್ ಹಾಗೂ ಮತ್ತೆ ಸಚಿವೆಯಾಗುವ ಅವಕಾಶಕ್ಕೆ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ತಣ್ಣೀರೆರಚಿದರು ಎಂದು ಮೋಟಮ್ಮ ಆತ್ಮಚರಿತ್ರೆಯಲ್ಲಿ ಬರೆದುಕೊಂಡಿದ್ದಾರೆ.

ಪಕ್ಷವನ್ನು ಬಲಪಡಿಸುವ ದೂರದೃಷ್ಟಿಯ ಚಿಂತನೆಯನ್ನು ಪಕ್ಷದ ಯಾವೊಬ್ಬ ನಾಯಕನೂ ಹೊಂದಿಲ್ಲ. ಎಲ್ಲರೂ ವೇದಿಕೆಯಲ್ಲಿ ಸೌಹಾರ್ದಯುತವಾಗಿ ವರ್ತಿಸುತ್ತಾರೆ ಆದರೆ ವೇದಿಕೆಯ ಹೊರಗೆ ಅವರು ತಮ್ಮ ವೈಯಕ್ತಿಕ ಲಾಭಗಳ ಬಗ್ಗೆ ಹೆಚ್ಚು ಗಮನ ಹರಿಸುತ್ತಾರೆ. ನಾನು ರಾಜಕೀಯದಲ್ಲಿ ಶಾಶ್ವತವಾಗಿ ಬೆಳೆಯುವ ಎಲ್ಲ ಅವಕಾಶಗಳನ್ನು ಸಿದ್ದರಾಮಯ್ಯ ಅವರು ತಡೆದಿದ್ದಾರೆ, ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.