ಒಮ್ಮೆ ದಕ್ಷಿಣ, ಮತ್ತೊಮ್ಮೆ ಉತ್ತರ! ಗೋಲು ಹೊಡೆಯಲಾರಿರಿ, ಗುರಿಯ ಮುಟ್ಟಲಾರಿರಿ, ನಿವೃತ್ತಿ ಘೋಷಣೆ ಮಾಡಬಾರದೇಕೆ?
ಓಲೈಕೆಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಮಾಸ್ಟರ್ ಡಿಗ್ರಿ ಪಡೆದಿದ್ದಾರೆ. ಎಷ್ಟು ಓಲೈಕೆ ಮಾಡಿದರೇನು ಫಲ, ಸಿದ್ದರಾಮಯ್ಯ ಅಲೆಯೂ ಇಲ್ಲ, ಒಂದು ಗಟ್ಟಿಯಾದ ನೆಲೆಯೂ ಇಲ್ಲ! ಎಂದು ಬಿಜೆಪಿ ಲೇವಡಿ ಮಾಡಿದೆ.

ಬೆಂಗಳೂರು: 2023 ರ ವಿಧಾನಸಭೆ ಚುನಾವಣೆಗೆ ಕ್ಷೇತ್ರ ಹುಡುಕಾಟದಲ್ಲಿರುವ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಓಲೈಕೆಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಮಾಸ್ಟರ್ ಡಿಗ್ರಿ ಪಡೆದಿದ್ದಾರೆ. ಎಷ್ಟು ಓಲೈಕೆ ಮಾಡಿದರೇನು ಫಲ, ಸಿದ್ದರಾಮಯ್ಯ ಅಲೆಯೂ ಇಲ್ಲ, ಒಂದು ಗಟ್ಟಿಯಾದ ನೆಲೆಯೂ ಇಲ್ಲ! ಎಂದು ಬಿಜೆಪಿ ಲೇವಡಿ ಮಾಡಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಬಾದಾಮಿ ಕ್ಷೇತ್ರಕ್ಕೆ ಹೋಗಿ ಬರಲು ವಯಸ್ಸಿನ ಸಮಸ್ಯೆ ಕಾಡುತ್ತದೆ. ಆದರೆ ಮುಖ್ಯಮಂತ್ರಿಯಾಗಲು ಯಾವುದೇ ಸಮಸ್ಯೆ ಕಾಡುವುದಿಲ್ಲ! ವಿಪರ್ಯಾಸವಲ್ಲದೆ ಮತ್ತೇನು? ಸಿದ್ದು ಟೂರಿಂಗ್ ಟಾಕೀಸ್ ಎಂದು ಕಾಲೆಳೆದಿದೆ.
ಸಿದ್ದರಾಮಯ್ಯ ಸರ್ಕಾರಿ ನೌಕರರಲ್ಲ, ಆದರೂ ವರ್ಗಾವಣೆಯಾಗುತ್ತಲೇ ಇದ್ದಾರೆ. ಅಧಿಕಾರದ ಮೋಹಕ್ಕಾಗಿ, ಸುರಕ್ಷಿತ ಕ್ಷೇತ್ರ ಹುಡುಕುತ್ತಿರುವ ಸಿದ್ದರಾಮಯ್ಯ ಅವರೇ, ಸ್ಪರ್ಧಿಸಲು ಒಂದು ಕ್ಷೇತ್ರ ಸಿಗುತ್ತಿಲ್ಲವೆಂದಾದರೇ ನಿಮ್ಮನ್ನು ಜನರು ತಿರಸ್ಕರಿಸಿದ್ದಾರೆ ಎಂದರ್ಥವಲ್ಲವೇ? ಎಂದು ಪ್ರಶ್ನಿಸಿದೆ.
ಪ್ರತಿ ಬಾರಿಯೂ ಸಿದ್ದರಾಮಯ್ಯ ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳುವುದರ ಅರ್ಥವೇ ಬೇರೆಯಿದೆ. ಒಮ್ಮೆ ವರುಣ, ಮತ್ತೊಮ್ಮೆ ಚಾಮುಂಡೇಶ್ವರಿ, ಮಗದೊಮ್ಮೆ ಬಾದಾಮಿ ಈ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಕೊನೆಯ ಚುನಾವಣೆ ಎಂಬ ಅರ್ಥದಲ್ಲಿ ಸಿದ್ದರಾಮಯ್ಯ ಹೇಳುತ್ತಿರುವುದು, ರಾಜಕೀಯ ನಿವೃತ್ತಿಯ ಕೊನೆಯ ಚುನಾವಣೆಯೆಂದಲ್ಲ!
ಒಮ್ಮೆ ದಕ್ಷಿಣ, ಮತ್ತೊಮ್ಮೆ ಉತ್ತರ! ಮುಂದಿನ ಚುನಾವಣೆಗೆ ಸುರಕ್ಷಿತ ಕ್ಷೇತ್ರ ಹುಡುಕುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮದು ರಾಜಕೀಯ ಆಟವೋ ಅಥವಾ ಫುಟ್ಬಾಲ್ ಆಟವೊ? ಗೋಲು ಹೊಡೆಯಲಾರಿರಿ, ಗುರಿಯ ಮುಟ್ಟಲಾರಿರಿ, ನಿವೃತ್ತಿ ಘೋಷಣೆ ಮಾಡಬಾರದೇಕೆ? ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ ಕಾರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


