ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ, ಚಿತ್ರದುರ್ಗ ಮಾಜಿ ಸಂಸದ ನಟ ಶಶಿಕುಮಾರ್, ಅನಿಲ್ ಕುಮಾರ್ ಬಿಜೆಪಿ ಸೇರ್ಪಡೆ
ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ, ಚಿತ್ರದುರ್ಗ ಮಾಜಿ ಸಂಸದ ನಟ ಶಶಿಕುಮಾರ್ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಗುರುವಾರ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರು: ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ, ಚಿತ್ರದುರ್ಗ ಮಾಜಿ ಸಂಸದ ನಟ ಶಶಿಕುಮಾರ್ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಗುರುವಾರ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ತುಮಕೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಮತ್ತು ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದರೂ ಆದ ನಟ ಶಶಿಕುಮಾರ್ ಇಂದು(ಗುರುವಾರ) ಬಿಜೆಪಿ ಸೇರ್ಪಡೆಯಾದರು. ನಗರದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಬ್ಬರಿಗೂ ಬಿಜೆಪಿ ಶಾಲು ಹೊದಿಸಿ, ಬಿಜೆಪಿ ಬಾವುಟ ಕೈಗೆ ಕೊಟ್ಟು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಸ್ವಾಗತಿಸಿದರು.
ಇದೇ ವೇಳೆ ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಕೂಡ ಬಿಜೆಪಿಗೆ ಸೇರ್ಪಡೆಯಾದರು. ಸಚಿವರಾದ ಅಶ್ವಥ್ ನಾರಾಯಣ್, ಎಸ್.ಟಿ. ಸೋಮಶೇಖರ್, ಗೋವಿಂದ ಕಾರಜೋಳ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಶಾಸಕರಾದ ಮಸಾಲೆ ಜಯರಾಂ, ಸಿ.ಪಿ.ಯೋಗೀಶ್ವರ್, ರಾಜ್ಯಸಭಾ ಸದಸ್ಯ ಜಗ್ಗೇಶ್, ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಉಪಸ್ಥಿತರಿದ್ದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಕೈ ಟಿಕೆಟ್ ತಪ್ಪಿದ್ದಕ್ಕೆ ಅಸಮಾಧಾನಗೊಂಡ ಮುದ್ದಹನುಮೇಗೌಡರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕುಣಿಗಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿಯಲು ನಿರ್ಧರಿಸಿದ್ದಾರೆ. ಇನ್ನು ನಟ ಶಶಿಕುಮಾರ್ ಅವರು ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಬಯಸಿದ್ದಾರೆ. ಅನಿಲ್ ಕುಮಾರ್ ಅವರು ಕೊರಟಗೆರೆ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


