ಗುಜರಾತ್ ವಿಧಾನಸಭಾ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಸಿಎಂ ಬೊಮ್ಮಾಯಿ
ಗುಜರಾತ್ ವಿಧಾನಸಭಾ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಗುಜರಾತ್ ವಿಧಾನಸಭಾ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಗುಜರಾತ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತಗಳ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.
ಸಂಪುಟ ವಿಸ್ತರಣೆ ಕುರಿತು ಈಗಾಗಲೇ ಮಾತನಾಡಿದ್ದೇನೆ. ವರಿಷ್ಠರು ಗುಜರಾತ್ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ. ಚುನಾವಣೆ ಮುಗಿದ ನಂತರ ಸಂಪುಟ ವಿಸ್ತರಣೆ ಕುರಿತ ಚರ್ಚೆಗೆ ನನ್ನನ್ನು ದೆಹಲಿಗೆ ಕರೆಯುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಬೊಮ್ಮಾಯಿ ಉತ್ತರಿಸಿದರು. ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಬಿಜೆಪಿ ವರಿಷ್ಠರೊಂದಿಗೆ ಮಾತುಕತೆಗಾಗಿ ಶೀಘ್ರದಲ್ಲಿಯೇ ನವದೆಹಲಿಗೆ ತೆರಳುವುದಾಗಿ ಸಿಎಂ ಇತ್ತೀಚಿಗೆ ಹೇಳಿದ್ದರು.
ಮುಂದಿನ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಲು ಸಂಪುಟ ವಿಸ್ತರಣೆ, ಪುನರ್ ರಚನೆ ಬಗ್ಗೆ ಆಕಾಂಕ್ಷಿಗಳು ಸಿಎಂ ಮೇಲೆ ಒತ್ತಡ ಹೇರುತ್ತಲೇ ಬಂದಿದ್ದಾರೆ. ಖಾಲಿಯಿರುವ ಆರು ಖಾತೆಗಳ ಭರ್ತಿಗೆ ಸಂಪುಟ ವಿಸ್ತರಣೆ ಅಥವಾ ಕೆಲವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲು ಸಂಪುಟ ಪುನರ್ ರಚನೆಯಾಗುವ ಸಾಧ್ಯತೆಯಿರುವುದಾಗಿ ಕೆಲವು ವರದಿಗಳು ಹೇಳಿವೆ.
ಗುಜರಾತಿನಂತೆಯೇ ರಾಜ್ಯದಲ್ಲಿಯೂ ಖಾತೆಗಳಲ್ಲಿ ಸಂಪೂರ್ಣವಾಗಿ ಬದಲಾವಣೆಯಾಗಬಹುದು ಎಂಬಂತಹ ಮಾತುಗಳು ಕೇಳಿಬರುತ್ತಿದೆ. ಚುನಾವಣೆಗಳು ಸಮೀಪಿಸುತ್ತಿರುವುದರಿಂದ ಇದು ತುಂಬಾ ತಡವಾಗಿದೆ ಎಂದು ಅನೇಕ ಆಕಾಂಕ್ಷಿಗಳು ಭಾವಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


