ಮುಂದಿನ ವಾರದಲ್ಲಿ ಹಾಸನ ಜಿಲ್ಲೆ ಪ್ರವಾಸ: ಎಚ್.ಡಿ ದೇವೇಗೌಡ
ಜಿಲ್ಲೆಯಲ್ಲಿ ಮುಂದಿನ ವಾರ ಪ್ರವಾಸ ಮಾಡುತ್ತೇನೆ. ಹಾಸನದ ಪ್ರತಿ ಕ್ಷೇತ್ರದಲ್ಲೂ ಒಂದೊಂದು ದಿನ ಪ್ರವಾಸ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.

ಹಾಸನ: ಜಿಲ್ಲೆಯಲ್ಲಿ ಮುಂದಿನ ವಾರ ಪ್ರವಾಸ ಮಾಡುತ್ತೇನೆ. ಹಾಸನದ ಪ್ರತಿ ಕ್ಷೇತ್ರದಲ್ಲೂ ಒಂದೊಂದು ದಿನ ಪ್ರವಾಸ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ಕಾರ್ತಿಕ ಸೋಮವಾರ ಹಿನ್ನೆಲೆಯಲ್ಲಿ ಹುಟ್ಟೂರು ಹರದನಹಳ್ಳಿಯಲ್ಲಿ ಮನೆದೇವರು ದೇವೇಶ್ವರನ ಪೂಜೆಗೆ ಆಗಮಿಸಿದ್ದ ವೇಳೆ ಹಾಸನದಲ್ಲಿ ಮಾತನಾಡಿದ ಅವರು, ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುತ್ತೇನೆ. ಹಾಸನ ಜಿಲ್ಲೆ ಪ್ರವಾಸದ ಬಳಿಕ ರಾಜ್ಯ ಪ್ರವಾಸವನ್ನು ಮಾಡುತ್ತೇನೆ. ರಾಜ್ಯವನ್ನ ಮರೆಯೊದಿಲ್ಲ, ಪ್ರವಾಸ ಮುಗಿಸಿ ಪಾರ್ಲಿಮೆಂಟ್‍ಗೂ ಹೋಗುತ್ತೇನೆ ಎಂದರು.
ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಆಮಂತ್ರಣ ವಿಚಾರದಲ್ಲಿ ನಡೆಯುತ್ತಿರುವ ಚರ್ಚೆ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಈ ವಿಚಾರದಲ್ಲಿ ಏನೂ ಮಾತನಾಡಲ್ಲ, ಯಾರ‍್ಯಾರು ಏನೇನು ಮಾಡಿದರು ಎಂದು ವಿಶ್ಲೇಷಣೆ ಮಾಡಲ್ಲ ಎಂದು ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


