ಕರ್ನಾಟಕ ವಿಧಾನಸಭೆ ಚುನಾವಣೆ: ಮದುವೆ ಮನೆಯಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿದ ಸಿದ್ದರಾಮಯ್ಯ!
ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ, ಮಲ್ಲಿಕಾರ್ಜುನ ನಾಗಪ್ಪ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಆರ್.ಶ್ರೀನಾಥ್ ನಡುವೆ ಗಂಗಾವತಿ ಕ್ಷೇತ್ರದಿಂದ ಪೈಪೋಟಿ ನಡೆದಿತ್ತು.

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರದಿಂದ ಇಕ್ಬಾಲ್ ಅನ್ಸಾರಿ ಹಾಗೂ ಕನಕಗಿರಿಯಿಂದ ಶಿವರಾಜ ತಂಗಡಗಿ ಅವರನ್ನು ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸಿಕೊಡಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತದಾರರಿಗೆ ಮನವಿ ಮಾಡಿದರು.
ಕೊಪ್ಪಳ ತಾಲ್ಲೂಕಿನ ವನಬಳ್ಳಾರಿಯಲ್ಲಿ ಭಾನುವಾರ ಕಾಂಗ್ರೆಸ್ ಮುಖಂಡ ಹಾಗೂ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹನುಮಂತಪ್ಪ ಅವರ ಸಹೋದರನ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊಪ್ಪಳ ಕ್ಷೇತ್ರದಲ್ಲಿ ರಾಘವೇಂದ್ರ ಹಿಟ್ನಾಳ, ಗಂಗಾವತಿಯಲ್ಲಿ ಇಕ್ಬಾಲ್ ಅನ್ಸಾರಿ, ಕನಕಗಿರಿಯಲ್ಲಿ ಶಿವರಾಜ್ ತಂಗಡಗಿ, ಕುಷ್ಟಗಿಯಲ್ಲಿ ಅಮರೇಗೌಡ ಭಯ್ಯಾಪುರ, ಯಲಬುರ್ಗಾದಲ್ಲಿ ಬಸವರಾಜ ರಾಯರೆಡ್ಡಿ ಅವರನ್ನು ಗೆಲ್ಲಿಸುವ ಹೊಣೆಗಾರಿಗೆ ನಿಮ್ಮದು. ಜಿಲ್ಲೆಯ ಐದು ಕ್ಷೇತ್ರದಲ್ಲಿ ಸಹ ಕಾಂಗ್ರೆಸ್ ಜಯಭೇರಿ ಬಾರಿಸಬೇಕು ಎಂದರು.
ಜಿಲ್ಲೆಯಿಂದ ನಮಗೆ ಪೂರ್ಣ ಬೆಂಬಲ ನೀಡಿ, ಜಿಲ್ಲೆಯ ಐದು ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಳಿಸಿಕೊಡುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.
ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ, ಮಲ್ಲಿಕಾರ್ಜುನ ನಾಗಪ್ಪ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಆರ್.ಶ್ರೀನಾಥ್ ನಡುವೆ ಗಂಗಾವತಿ ಕ್ಷೇತ್ರದಿಂದ ಪೈಪೋಟಿ ನಡೆದಿತ್ತು. ಮೂವರೂ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದ ಸೋಮವಾರಕ್ಕೂ ಮೊದಲೇ ಸಿದ್ದರಾಮಯ್ಯ ಅವರು ‘ಇಕ್ಬಾಲ್ ಅನ್ಸಾರಿ ಗಂಗಾವತಿ ಕ್ಷೇತ್ರದ ಅಭ್ಯರ್ಥಿ’ ಎಂದು ಘೋಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


