ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಮುಕ್ತ ಭಾರತದ ಸಂಕಲ್ಪವನ್ನು ಪ್ರತಿಯೊಬ್ಬರೂ ಈಡೇರಿಸಬೇಕು: ಕಟೀಲ್
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮುಕ್ತ ಭಾರತದ ಸಂಕಲ್ಪವನ್ನು ಪ್ರತಿಯೊಬ್ಬರೂ ಈಡೇರಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಕರೆ ನೀಡಿದ್ದಾರೆ.

ಮೈಸೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮುಕ್ತ ಭಾರತದ ಸಂಕಲ್ಪವನ್ನು ಪ್ರತಿಯೊಬ್ಬರೂ ಈಡೇರಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಕರೆ ನೀಡಿದ್ದಾರೆ.
ಮೈಸೂರಿನಲ್ಲಿ ಬೂತ್ ಮಟ್ಟದ ಅಧ್ಯಕ್ಷರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು ಸಾಮಾನ್ಯ ಕಾರ್ಯಕರ್ತನೂ ಚುನಾವಣೆಯಲ್ಲಿ ಗೆಲ್ಲುವಂತೆ ತಮ್ಮ ಜವಾಬ್ದಾರಿಯನ್ನು ನಿಭಾಯಿಸಬೇಕು. 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡನ್ನೂ ಸೋಲಿಸಲು ಬಿಜೆಪಿ ಎಲ್ಲಾ ಬೂತ್ಗಳಲ್ಲಿ ಪ್ರಾಬಲ್ಯ ಸಾಧಿಸಬೇಕು ಮತ್ತು 150 ಸ್ಥಾನಗಳನ್ನು ಗೆಲ್ಲುವಂತೆ ಮಾಡಬೇಕೆಂದು ಹೇಳಿದರು.
ಇದೇ ವೇಳೆ ಪ್ರಧಾನಿ ಮೋದಿ ಅವರು ಕಳೆದ 75 ವರ್ಷಗಳಲ್ಲಿ ರಾಷ್ಟ್ರ ಕಂಡ ಅತ್ಯಂತ ಗಮನಾರ್ಹ ನಾಯಕ ಎಂದು ಶ್ಲಾಘಿಸಿದ ಅವರು, ಮೋದಿ ಅವರು ಮುಂದಿನ 10 ವರ್ಷಗಳ ಕಾಲ ಅಧಿಕಾರದಲ್ಲಿ ಇರುತ್ತಾರೆ ಎಂದು ತಿಳಿಸಿದರು.
ಬಳಿಕ ಸಿಎಲ್ಪಿ ನಾಯಕ ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆ ನೀಡಿದ ಅವರು, ಮಾಜಿ ಸಿಎಂ ಪಿಎಫ್ಐ ನಿಷೇಧದ ವಿರುದ್ಧವಿದ್ದಾರೆ. ಅಧಿಕಾರದಲ್ಲಿದ್ದಾಗ ಹತ್ಯೆಯಾಗಿದ್ದ 24 ಹಿಂದೂ ಕಾರ್ಯಕರ್ತರ ಕುಟುಂಬಕ್ಕೆ ಪರಿಹಾರ ನೀಡಲಿಲ್ಲ ಎಂದರು.
ಸಿದ್ದರಾಮಯ್ಯ ಅವರು ಎಸ್ಡಿಪಿಐ ಕಾರ್ಯಕರ್ತರೊಂದಿಗೆ ಪಾದಯಾತ್ರೆ ನಡೆಸುತ್ತಿರುವುದನ್ನು ಟೀಕಿಸಿ, ಕಾಂಗ್ರೆಸ್ನಿಂದ ಹಿಂದೂಗಳು ರಕ್ಷಣೆಯ ಭರವಸೆ ಕಳೆದುಕೊಂಡಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಮತ್ತು ಜೆಡಿಎಸ್ನ ಪಂಚರತ್ನ ಯಾತ್ರೆ ಜನರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ಮಲ್ಲಿಕಾರ್ಜುನ ಖರ್ಗೆ ಮತ್ತು ಜಿ ಪರಮೇಶ್ವರ ಅವರನ್ನು ಸೋಲಿಸಲು ಷಡ್ಯಂತ್ರ ಮಾಡಿದ ಹಿನ್ನೆಲೆಯಲ್ಲಿ ಜನರು ಸಿದ್ದರಾಮಯ್ಯ ಅವರ ಮೇಲಿದ್ದ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರು, 2023ರ ಚುನಾವಣೆಯಲ್ಲಿ ಸ್ಪರ್ಧಿಸಲು ಕ್ಷೇತ್ರಕ್ಕಾಗಿ ಹುಡಾಕ ನಡೆಸುತ್ತಿದ್ದಾರೆಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


