ಬಿಜೆಪಿ ನಡೆಸುತ್ತಿರುವುದು ಜನಸ್ಪಂದನ ಸಮಾವೇಶವಲ್ಲ, "ಕಮಿಷನ್ ಸಮಾವೇಶ"; ಏನು ಸಾಧನೆ ಹೇಳಲು ಹೊರಟಿದ್ದೀರಿ?: ಕಾಂಗ್ರೆಸ್ ಟೀಕೆ
ಇಂದಿನ ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಸರ್ಕಾರದ ಸಾಧನೆ ಏನಿದೆ ಎಂದು ಹೇಳಲು ಹೊರಟಿದ್ದೀರಿ ಎಂದು ಸಿಎಂ ಬೊಮ್ಮಾಯಿಯವರನ್ನು ಹಾಗೂ ಸರ್ಕಾರವನ್ನು ಟೀಕಿಸಿ ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.

ಬೆಂಗಳೂರು: ಇಂದಿನ ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಸರ್ಕಾರದ ಸಾಧನೆ ಏನಿದೆ ಎಂದು ಹೇಳಲು ಹೊರಟಿದ್ದೀರಿ ಎಂದು ಸಿಎಂ ಬೊಮ್ಮಾಯಿಯವರನ್ನು ಹಾಗೂ ಸರ್ಕಾರವನ್ನು ಟೀಕಿಸಿ ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.
ರಾಜ್ಯದಲ್ಲಿ ನಡೆಯುವ ಕಾಮಗಾರಿಗಳಿಗೆ ಶೇಕಡಾ 40ರಷ್ಟು , ಬಿಬಿಎಂಪಿಯಲ್ಲಿ ಶೇಕಡಾ 50 ಪರ್ಸೆಂಟ್ ಕಮಿಷನ್ ಆರೋಪ ಕೇಳಿಬಂದಿದೆ. ಬೆಂಗಳೂರು ಉಸ್ತುವಾರಿಗಾಗಿ ಸಚಿವರ ಪೈಪೋಟಿ ನಡೆಯದಿರುತ್ತದೆಯೇ, ಗುತ್ತಿಗೆದಾರರು ಸರ್ಕಾರದ ಕಮಿಷನ್ ಕಿರುಕುಳದ ಬಗ್ಗೆ ಪ್ರಧಾನಿಗೆ ಪತ್ರ ಬರೆದರೂ ಪ್ರಯೋಜನವಿಲ್ಲ, ಪತ್ರಿಕಾಗೋಷ್ಠಿ ನಡೆಸಿದರೂ ಉಪಯೋಗವಿಲ್ಲ, 40% ಕಮಿಷನ್ ಲೂಟಿ ನಿಂತೇ ಇಲ್ಲ. ಭ್ರಷ್ಟಾಚಾರವನ್ನೇ ಉಸಿರಾಡುತ್ತಿರುವ ನಿಮ್ಮ ಸರ್ಕಾರದ ಸಾಧನೆ ಏನಿದೆ, ಅಕ್ರಮಗಳನ್ನು ಮುಚ್ಚಿಕೊಳ್ಳುವುದೇ ಎಂದು ಕೇಳಿದ್ದಾರೆ.
ಬಿಜೆಪಿ ನಡೆಸುತ್ತಿರುವುದು ಜನಸ್ಪಂದನ ಸಮವೇಶವಲ್ಲ "ಕಮಿಷನ್ ಸಮಾವೇಶ" 40% ಕಮಿಷನ್ ಲೂಟಿಯ ಪಾಪದ ಹಣದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಯಾವ ಸಾಧನೆ ಹೇಳಿಕೊಳ್ಳುವಿರಿ, ನಿಮ್ಮದೇ ಪಕ್ಷದ ಕಾರ್ಯಕರ್ತ & ಗುತ್ತಿಗೆದಾರ ಸಂತೋಷ್ ಪಾಟೀಲ್‌ರನ್ನು ಕಮಿಷನ್ ಕಿರುಕುಳದಲ್ಲಿ ಕೊಂದಿದ್ದನ್ನು ಹೇಳಿಕೊಳ್ಳುವಿರಾ, ಹೈಕೋರ್ಟ್ ಕೂಡ ಈ ಬಗ್ಗೆ ಪ್ರಶ್ನಿಸಿದೆ, ನಾಚಿಗೆಯಾಗಬೇಕು ನಿಮಗೆ ಎಂದು ಪ್ರಶ್ನೆಯ ಮೇಲೆ ಪ್ರಶ್ನೆ ಹಾಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


