ಬೆಳಗಾವಿ: ರಮೇಶ್ ಜಾರಕಿಹೊಳಿ ನಾಯಕತ್ವದಲ್ಲಿ 18 ಕ್ಷೇತ್ರಗಳಲ್ಲಿ ಚುನಾವಣೆ ಎದುರಿಸಲು ಬಿಜೆಪಿ ಒಲವು
ಸಿಡಿ ಕೇಸ್ ನಲ್ಲಿ ಆರೋಪದಿಂದ ಹೊರಬರಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತೀವ್ರ ಹೋರಾಟ ನಡೆಸುತ್ತಿರುವಂತೆಯೇ, ಅವರ ನಾಯಕತ್ವದಲ್ಲಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳನ್ನು 2023ರ ವಿಧಾನಸಭಾ ಚುನಾವಣೆಯಲ್ಲಿ ಎದುರಿಸಲು ಬಿಜೆಪಿ ಎದುರು ನೋಡುತ್ತಿದೆ.

ಬೆಳಗಾವಿ: ಸಿಡಿ ಕೇಸ್ ನಲ್ಲಿ ಆರೋಪದಿಂದ ಹೊರಬರಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತೀವ್ರ ಹೋರಾಟ ನಡೆಸುತ್ತಿರುವಂತೆಯೇ, ಅವರ ನಾಯಕತ್ವದಲ್ಲಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳನ್ನು 2023ರ ವಿಧಾನಸಭಾ ಚುನಾವಣೆಯಲ್ಲಿ ಎದುರಿಸಲು ಬಿಜೆಪಿ ಎದುರು ನೋಡುತ್ತಿದೆ.
ಬೆಳಗಾವಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಾರಕಿಹೊಳಿ ನಾಯಕತ್ವದಲ್ಲಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಜಾರಕಿಹೊಳಿ ಖಂಡಿತವಾಗಿಯೂ ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುತ್ತಾರೆ. ಆದರೆ, ಯಾವಾಗ ಅವರನ್ನು ಸಂಪುಟಕ್ಕೆ ಸೇರ್ಪಡೆ ಸೇರಿಸಿಕೊಳ್ಳಬೇಕು ಎಂಬುದು ಮುಖ್ಯಮಂತ್ರಿಗೆ ಬಿಟ್ಟ ವಿಚಾರ ಎಂದರು.
ಜಾರಕಿಹೊಳಿ 16 ಇತರ ಶಾಸಕರೊಂದಿಗೆ ಬಿಜೆಪಿ ಸೇರುವುದರೊಂದಿಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವಲ್ಲಿ ನೆರವಾದರು. ತದನಂತರ ಬಿಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ರಾಜ್ಯದಲ್ಲಿ ತ್ವರಿತಗತಿಯಲ್ಲಿ ಅಭಿವೃದ್ಧಿಯ ಕೆಲಸಗಳಾಗಿವೆ ಎಂದು ಅವರು ಹೇಳಿದರು.
ದೇಶದಲ್ಲಿ ಪಿಎಫ್ ಐ ಸಂಘಟನೆ ಬ್ಯಾನ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಕಟೀಲ್, ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡಬೇಕಾಗಿದೆ. ಈ ಹಿಂದೆ ಪಿಎಫ್ ಐ, ಎಸ್ ಡಿಪಿಐ ನಂತಹ ಸಂಘಟನೆಗಳನ್ನು ಕಾಂಗ್ರೆಸ್ ಪಕ್ಷ ಪ್ರೋತ್ಸಾಹಿಸಿದೆ. ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಅಧಿಕಾರದಲ್ಲಿ ಉಳಿದರೆ ದೇಶ ನಾಶವಾಗಲಿದೆ ಎಂಬುದನ್ನು ಮಹಾತ್ಮ ಗಾಂಧಿ ಅರಿತಿದ್ದರು. ಸ್ವಾತಂತ್ರ್ಯ ನಂತರ ಕಾಂಗ್ರೆಸ್ ವಿಭಜನೆಯನ್ನು ಅವರು ಬಯಸಿದ್ದರು ಎಂದರು.
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ರೇಡ್ ಕುರಿತಂತೆ ಪ್ರತಿಕ್ರಿಯಿಸಿದ ಕಟೀಲ್, ಅನೇಕ ವ್ಯಕ್ತಿಗಳ ವಿರುದ್ಧ ದಾಳಿ ನಡೆದಿದೆ. ಆದರೆ, ಪ್ರಾಮಾಣಿಕರಾಗಿರುವವರು ದಾಳಿಗೆ ಭಯಪಡಬೇಕಾದ ಅಗತ್ಯವಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೂ ಅನೇಕ ಮುಖಂಡರ ಮನೆಗಳ ಮೇಲೆ ದಾಳಿ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ 9 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಅಮಿತ್ ಶಾ ಜೈಲಿಗೂ ಹೋಗಿ ಬಂದಿದ್ದಾರೆ. ಕಾಂಗ್ರೆಸ್ ಅಧಿಕಾರದ ಸಂದರ್ಭದಲ್ಲಿ ಬಿಜೆಪಿ ಮುಖಂಡರ ವಿಚಾರಣೆ ಸಂದರ್ಭದಲ್ಲಿ ಪಕ್ಷ ಯಾವತ್ತೂ ಕೂಡಾ ಪ್ರತಿಭಟನೆ ನಡೆಸಲಿಲ್ಲ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


