ಕರ್ನಾಟಕ ವಿಧಾನಸಭೆ ಚುನಾವಣೆ: ಶತಾಯಗತಾಯ ಅಧಿಕಾರಕ್ಕೇರಲು ಗುಜರಾತ್ ತಂತ್ರಗಾರಿಕೆ ಅಳವಡಿಕೆಗೆ ಬಿಜೆಪಿ ಮುಂದು
ಮೇ 10 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ, ಬಿಜೆಪಿ ಪ್ರಚಾರದಲ್ಲಿ ಎಲ್ಲಾ ರಾಜ್ಯಗಳ ನಾಯಕರನ್ನು ಕಣಕ್ಕೆ ಇಳಿಸುವ ಗುಜರಾತ್ ಚುನಾವಣೆಯ ಸಮಯದಲ್ಲಿ ಬಳಸಿದ ಅದೇ ತಂತ್ರವನ್ನು ಅಳವಡಿಸಿಕೊಳ್ಳಲು ಎದುರು ನೋಡುತ್ತಿದೆ.

ಬೆಂಗಳೂರು: ಮೇ 10 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ, ಬಿಜೆಪಿ ಪ್ರಚಾರದಲ್ಲಿ ಎಲ್ಲಾ ರಾಜ್ಯಗಳ ನಾಯಕರನ್ನು ಕಣಕ್ಕೆ ಇಳಿಸುವ ಗುಜರಾತ್ ಚುನಾವಣೆಯ ಸಮಯದಲ್ಲಿ ಬಳಸಿದ ಅದೇ ತಂತ್ರವನ್ನು ಅಳವಡಿಸಿಕೊಳ್ಳಲು ಎದುರು ನೋಡುತ್ತಿದೆ.
ಕೇಂದ್ರ ಮತ್ತು ರಾಜ್ಯ ಸಚಿವರು, ಸಂಸದರು ಮತ್ತು ಶಾಸಕರು ಸೇರಿದಂತೆ ವಿವಿಧ ರಾಜ್ಯಗಳ 50-60 ನಾಯಕರಿಗೆ ಕರ್ನಾಟಕ ಚುನಾವಣಾ ಪ್ರಚಾರದ ಉಸ್ತುವಾರಿಯನ್ನು ಪಕ್ಷ ವಹಿಸಿದೆ ಎಂದು ಬಿಜೆಪಿ ಮೂಲಗಳು ಎಎನ್‌ಐಗೆ ತಿಳಿಸಿವೆ.
ಮೂಲಗಳ ಪ್ರಕಾರ, ಬಿಜೆಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಮತ್ತು ರಾಜ್ಯ ಚುನಾವಣಾ ಉಸ್ತುವಾರಿ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ನಡುವೆ ಸಭೆ ನಡೆದಿದೆ. ರಾಜ್ಯದಲ್ಲಿ ಪಕ್ಷವನ್ನು ಗೆಲ್ಲಿಸುವಂತೆ ಸಭೆಯಲ್ಲಿ ಮುಖಂಡರಿಗೆ ಸೂಚಿಸಲಾಯಿತು.
ಕೇಂದ್ರ ರಾಜ್ಯ ಸಚಿವ ಪಂಕಜ್ ಚೌಧರಿ, ಸಂಸದ ನಿಶಿಕಾಂತ್ ದುಬೆ, ರಮೇಶ್ ಬಿಧುರಿ, ಸಂಜಯ್ ಭಾಟಿಯಾ, ಬಿಹಾರ ಶಾಸಕ ಸಂಜೀವ್ ಚೌರಾಸಿಯಾ, ಯುಪಿ ಶಾಸಕ ಸತೀಶ್ ದ್ವಿವೇದಿ ಮತ್ತು ಆಂಧ್ರ ಪ್ರದೇಶದ ನಾಯಕ ಪಿ ಸುಧಾಕರ್ ರೆಡ್ಡಿ ಅವರು ಹಲವು ಚುನಾವಣೆಗಳಲ್ಲಿ ನಿರ್ವಹಿಸಿದ ಅನುಭವವನ್ನು ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಕ್ಷವು 224 ವಿಧಾನಸಭಾ ಕ್ಷೇತ್ರಗಳ ಪೈಕಿ 115 ಕ್ಷೇತ್ರಗಳನ್ನು ಗುರುತಿಸಿದೆ. ಪ್ರತಿಯೊಬ್ಬ ನಾಯಕನಿಗೆ 2-3 ಕ್ಷೇತ್ರಗಳ ಜವಾಬ್ದಾರಿಯನ್ನು ನೀಡಲಾಗಿದೆ ಮತ್ತು ಪಕ್ಷಕ್ಕೆ ನೆಲೆ ಇಲ್ಲದ ಕ್ಷೇತ್ರಗಳಲ್ಲಿ ಪಕ್ಷದ ಅವಕಾಶಗಳನ್ನು ಹೆಚ್ಚಿಸುವಂತೆ ಕೇಳಿಕೊಳ್ಳಲಾಗಿದೆ.
ಗುಜರಾತ್ ವಿಧಾನಸಭೆ ಚುನಾವಣೆ ಸಮಯದಲ್ಲಿ, ಆಡಳಿತಾರೂಢ ಬಿಜೆಪಿ ಭಾರಿ ಜನಾದೇಶದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದಿತು. ಕೇಸರಿ ಪಕ್ಷವು ವಿವಿಧ ನಾಯಕರಿಗೆ ಪ್ರಮುಖ ಚುನಾವಣಾ ಜವಾಬ್ದಾರಿಗಳನ್ನು ವಹಿಸಿ, ಅಪೇಕ್ಷಿತ ಲಾಭಾಂಶವನ್ನು ಗಳಿಸಿತು.
ಬಿಜೆಪಿ ಅಧಿಕಾರದಲ್ಲಿರುವ ದಕ್ಷಿಣದ ಏಕೈಕ ರಾಜ್ಯ ಕರ್ನಾಟಕವಾಗಿದೆ. ಪಕ್ಷವು ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಾಯಿಸಿತು. ಪ್ರಬಲ ಲಿಂಗಾಯತ ನಾಯಕರೆಂದೇ ಗುರುತಿಸಿಕೊಂಡಿರುವ ಹಿರಿಯ ಬಿಎಸ್ ಯಡಿಯೂರಪ್ಪ ಅವರ ಸ್ಥಾನದಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತು.
ಮೂಲಗಳ ಪ್ರಕಾರ, ಬಿಜೆಪಿಯು ಮುಂಬರುವ ರಾಜ್ಯ ಚುನಾವಣೆಯಲ್ಲಿ ಆಡಳಿತಾರೂಢ ಪಕ್ಷಕ್ಕೆ ಹಿನ್ನಡೆಯಾಗುವ ಬಗ್ಗೆ ಚಿಂತಿಸುತ್ತಿದೆ.
ಮೇ 10 ರಂದು ರಾಜ್ಯದ 224 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. 2018ರ ಚುನಾವಣೆಯಲ್ಲಿ ಬಿಜೆಪಿ 121 ಸ್ಥಾನಗಳನ್ನು ಗೆದ್ದಿದ್ದರೆ, ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ ಕಾಂಗ್ರೆಸ್ ಮತ್ತು ಜೆಡಿಎಸ್ ಕ್ರಮವಾಗಿ 70 ಮತ್ತು 30 ಸ್ಥಾನಗಳನ್ನು ಗಳಿಸಿದ್ದವು.
ಚುನಾವಣಾ ಆಯೋಗವು ಮಾರ್ಚ್ 29 ರಂದು ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿತು. ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


