ಕಾಂಗ್ರೆಸ್‌ನಲ್ಲಿ ಬ್ಲ್ಯಾಕ್‌ಮೇಲ್ ಕೆಲಸ ನಡೆಯುವುದಿಲ್ಲ: ಡಿಕೆ ಶಿವಕುಮಾರ್
ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್ ಗಾಗಿ ಹಗ್ಗಜಗ್ಗಾಟ ನಡೆಸುತ್ತಿರುವ ನಾಯಕರ ಕುರಿತು ಕಠಿಣವಾಗಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು, ಕಾಂಗ್ರೆಸ್‌ನಲ್ಲಿ ಬ್ಲ್ಯಾಕ್‌ಮೇಲ್ ಕೆಲಸ ಮಾಡುವುದಿಲ್ಲ ಎಂದು ಭಾನುವಾರ ಹೇಳಿದ್ದಾರೆ.

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್ ಗಾಗಿ ಹಗ್ಗಜಗ್ಗಾಟ ನಡೆಸುತ್ತಿರುವ ನಾಯಕರ ಕುರಿತು ಕಠಿಣವಾಗಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು, ಕಾಂಗ್ರೆಸ್‌ನಲ್ಲಿ ಬ್ಲ್ಯಾಕ್‌ಮೇಲ್ ಕೆಲಸ ಮಾಡುವುದಿಲ್ಲ ಎಂದು ಭಾನುವಾರ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿರುವ ಕುರಿತು ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.
‘ಕಾಂಗ್ರೆಸ್‌ನಲ್ಲಿ ಬ್ಲ್ಯಾಕ್‌ಮೇಲ್ ಕೆಲಸ ಮಾಡುವುದಿಲ್ಲ’, ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದು ನಿಜ. ಇಂತಹ ಸಮಸ್ಯೆಗಳು ಎಲ್ಲ ಪಕ್ಷಗಳಲ್ಲೂ ಇರುವುದು ಸಾಮಾನ್ಯ. ಬಿಜೆಪಿಯಲ್ಲಿ ಇಲ್ಲ ಎಂದು ಭಾವಿಸುತ್ತೀರಾ? ಅವರು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಏಕೆ ಬಾಕಿ ಉಳಿಸಿಕೊಂಡಿದ್ದಾರೆ? ಬಿಜೆಪಿ ಮತ್ತು ಜೆಡಿಎಸ್‌ನಲ್ಲೂ ಸಾಕಷ್ಟು ಆಂತರಿಕ ಸಮಸ್ಯೆಗಳಿವೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


