ವರ್ಕೌಟ್ ಆಯ್ತು ಬೊಮ್ಮಾಯಿ ಪ್ಲಾನ್: ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಮೊಮ್ಮಗ ಶಶಿಭೂಷಣ ಹೆಗಡೆ ಬಿಜೆಪಿ ಸೇರ್ಪಡೆ!
ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಮೊಮ್ಮಗ ಶಶಿಭೂಷಣ ಹೆಗಡೆ ಸೋಮವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಮೊಮ್ಮಗ ಶಶಿಭೂಷಣ ಹೆಗಡೆ ಸೋಮವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಚುನಾವಣಾ ನಿರ್ವಹಣ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ಭಗವಂತರಾವ್ ಖೂಬಾ, ಮಾಜಿ ಸಚಿವ ಸಿ.ಪಿ. ಯೋಗೇಶ್ವರ ಸಮ್ಮುಖದಲ್ಲಿ ಶಶಿಭೂಷಣ ಸೇರ್ಪಡೆಗೊಂಡರು.
ಶಶಿಭೂಷಣ್ ಹೆಗಡೆ ಹಿಂದೆ ಕುಮಟಾ ಕ್ಷೇತ್ರದಲ್ಲಿ ಎರಡು ಬಾರಿ ವಿಧಾನಸಭೆಗೆ ಸ್ಪರ್ಧಿಸಿ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದರು. 2018 ರಲ್ಲಿ ಶಿರಸಿ ಕ್ಷೇತ್ರದಲ್ಲಿ 3ನೇ ಸ್ಥಾನದಲ್ಲಿದ್ದರು. ಮೂರು ಸೋಲಿನ ನಂತರ ಜೆಡಿಎಸ್ ನಲ್ಲೇ ತಮ್ಮ ಅಸ್ತಿತ್ವ ಉಳಿಸಿಕೊಂಡು ಶಿರಸಿ ಕ್ಷೇತ್ರದಲ್ಲಿ ತಮ್ಮ ಹಿಡಿತ ಗಟ್ಟಿಗೊಳಿಸಿಕೊಳ್ಳುವ ಪ್ರಯತ್ನದಲ್ಲಿ ಸಾಗಿದ್ದರು.
ಈ ಬಾರಿ ಮತ್ತೆ ಸ್ಪರ್ಧಿಸಲು ಅವಕಾಶ ಒದಗಿ ಬಂದರೂ ಸ್ಫರ್ಧಿಸುವ ಮನಸ್ಸು ಮಾಡಲಿಲ್ಲ. ಈ ನಡುವೆ ಕಾಂಗ್ರೆಸ್ ಸಹ ಶಶಿಭೂಷಣ್ ಹೆಗಡೆ ಅವರನ್ನ ಪಕ್ಷಕ್ಕೆ ಸೆಳೆಯಲು ಕಸರತ್ತು ನಡೆಸಿತ್ತು. ಆದರೇ ಸಿಎಂ ಬಸವರಾಜ್ ಬೊಮ್ಮಾಯಿ ಪ್ರಯತ್ನದ ಫಲದಿಂದ ಕೊನೆಗೂ ಮತ್ತೆ ಶಶಿಭೂಷಣ್ ಹೆಗಡೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಗೇರಿ ಅವರಿಗೆ ಪ್ರಬಲ ಬ್ರಾಹ್ಮಣ ನಾಯಕರ ಪ್ರತಿಸ್ಪರ್ಧಿ ಇಲ್ಲದಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


