ರಾಜಕೀಯ

ಚುನಾವಣೆ ಹೊತ್ತಲ್ಲಿ ಪಕ್ಷಾಂತರ ಪರ್ವ; ಕಾಂಗ್ರೆಸ್ ನಿಂದ 15 ಜನ ಜೆಡಿಎಸ್ ಗೆ: ಹೆಚ್ ಡಿ ಕುಮಾರಸ್ವಾಮಿ

ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಬಿರುಸಾಗಿ ನಡೆಯುತ್ತಿದೆ. ಮೂರು ಪ್ರಮುಖ ರಾಜಕೀಯ ಪಕ್ಷಗಳಲ್ಲಿಯೂ ಇದು ಕಂಡುಬರುತ್ತಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ವಂಚಿತ ಮುಖಂಡರು ಜೆಡಿಎಸ್ ನತ್ತ ಮುಖ ಮಾಡಿದ್ದಾರೆ.

ಚುನಾವಣೆ ಹೊತ್ತಲ್ಲಿ ಪಕ್ಷಾಂತರ ಪರ್ವ; ಕಾಂಗ್ರೆಸ್ ನಿಂದ 15 ಜನ ಜೆಡಿಎಸ್ ಗೆ: ಹೆಚ್ ಡಿ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ
Published On :

ರಾಮನಗರ: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಬಿರುಸಾಗಿ ನಡೆಯುತ್ತಿದೆ. ಮೂರು ಪ್ರಮುಖ ರಾಜಕೀಯ ಪಕ್ಷಗಳಲ್ಲಿಯೂ ಇದು ಕಂಡುಬರುತ್ತಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ವಂಚಿತ ಮುಖಂಡರು ಜೆಡಿಎಸ್ ನತ್ತ ಮುಖ ಮಾಡಿದ್ದಾರೆ.

ಕೇತಗಾನಹಳ್ಳಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಮಾಜಿ ವಿಧಾನಪರಿಷತ್ ಸದಸ್ಯ ರಘು ಆಚಾರ್ ಈಗಾಗಲೇ ಮಾತುಕತೆ ನಡೆಸಿದ್ದು, ಜೆಡಿಎಸ್ ಸೇರುವುದಾಗಿ ಅವರೇ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದಿಂದ 15 ಜನರು ಜೆಡಿಸ್ ಗೆ ಬರ್ತಾರೆ ಎಂದರು. 

ಈ ಹಿಂದೆ ಕಾಂಗ್ರೆಸ್ ನವರು ಜೆಡಿಎಸ್ ಮುಳುಗಿಸಲು ಶಾಸಕರನ್ನ ಕರೆದುಕೊಂಡು ಹೋದರು. ಇದೀಗ ಕಾಂಗ್ರೆಸ್​​ನಿಂದಲೇ ಜೆಡಿಎಸ್​​ಗೆ ಬರುತ್ತಿದ್ದಾರೆ. ಸೋಮವಾರ ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಇವರು ಇದೇ ವೇಳೆ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.