ಬಿಜೆಪಿಗೆ ಕಿಚ್ಚ ಸುದೀಪ್ ಬೆಂಬಲ: ನಟನ ಸಿನಿಮಾಗಳ ಪ್ರಸಾರ ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ಜೆಡಿಎಸ್ ಮನವಿ
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ನಟ ಕಿಚ್ಚ ಸುದೀಪ್ ಘೋಷಿಸಿದ ಬೆನ್ನಲ್ಲೇ, ಜೆಡಿಎಸ್ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದು, ನಟನನ್ನು ಒಳಗೊಂಡ ಚಲನಚಿತ್ರಗಳು, ಜಾಹೀರಾತುಗಳು ಮತ್ತು ಇತರ ಕಾರ್ಯಕ್ರಮಗಳ ಪ್ರಸಾರವನ್ನು ನಿಷೇಧಿಸುವಂತೆ ಕೋರಿದೆ.

ಬೆಂಗಳೂರು: ಮೇ 10 ರಂದು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ನಟ ಕಿಚ್ಚ ಸುದೀಪ್ ಘೋಷಿಸಿದ ಬೆನ್ನಲ್ಲೇ, ಜೆಡಿಎಸ್ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದು, ನಟನನ್ನು ಒಳಗೊಂಡ ಚಲನಚಿತ್ರಗಳು, ಜಾಹೀರಾತುಗಳು ಮತ್ತು ಇತರ ಕಾರ್ಯಕ್ರಮಗಳ ಪ್ರಸಾರವನ್ನು ನಿಷೇಧಿಸುವಂತೆ ಕೋರಿದೆ.
ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸುದೀಪ್ ಅವರ ಸಿನಿಮಾ, ಜಾಹೀರಾತು, ಟಿವಿ ಕಾರ್ಯಕ್ರಮಗಳ ಪ್ರಸಾರವನ್ನು ನಿಷೇಧಿಸಬೇಕು ಎಂದು ಜೆಡಿಎಸ್ ರಾಜ್ಯ ಕಾನೂನು ಘಟಕದ ವಕ್ತಾರ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಗುರುವಾರ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ.
ನಟನ ಚಲನಚಿತ್ರಗಳು ಅಥವಾ ಕಾರ್ಯಕ್ರಮಗಳ ಪ್ರಸಾರವು ಮತದಾರರ ಮೇಲೆ ಪ್ರಭಾವ ಬೀರಬಹುದು. ಆದ್ದರಿಂದ ಅವುಗಳನ್ನು ನಿಷೇಧಿಸಲು ಆದೇಶವನ್ನು ಹೊರಡಿಸಬೇಕು. ಸಾರ್ವಜನಿಕ ಸ್ಥಳಗಳಿಂದ ನಟನ ಫೋಟೊ ಇರುವ ಪೋಸ್ಟರ್‌ಗಳನ್ನು ತೆಗೆಯುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸಿಇಸಿಗೆ ಮನವಿ ಮಾಡಿದರು.
ಬೊಮ್ಮಾಯಿ ಅವರೊಂದಿಗೆ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುದೀಪ್, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ಘೋಷಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


