ವಿಧಾನಸಭಾ ಚುನಾವಣೆ: 60 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಅಭ್ಯರ್ಥಿಗಳ ಕೊರತೆ- ಸಿಎಂ ಬೊಮ್ಮಾಯಿ
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 60 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಗಳಿಲ್ಲ. ಹೀಗಾಗಿ ಅಲ್ಲೊಬ್ಬ ಇಲ್ಲೊಬ್ಬ ಎಂದು ನಾಯಕರನ್ನು ಆಹ್ವಾನಿಸುತ್ತಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ವ್ಯಂಗ್ಯವಾಡಿದ್ದಾರೆ.

ಶಿವಮೊಗ್ಗ: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 60 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಗಳಿಲ್ಲ. ಹೀಗಾಗಿ ಅಲ್ಲೊಬ್ಬ ಇಲ್ಲೊಬ್ಬ ಎಂದು ನಾಯಕರನ್ನು ಆಹ್ವಾನಿಸುತ್ತಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೂ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿಯ ಹಲವು ಶಾಸಕರನ್ನು ಸಂಪರ್ಕಿಸಿ ಟಿಕೆಟ್ ಆಫರ್ ನೀಡಿದ್ದರು. ಸಮರ್ಥ ಅಭ್ಯರ್ಥಿಗಳನ್ನು ಪ್ರಸ್ತುತಪಡಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಹೀಗಾಗಿಯೇ ಮೀಸಲಾತಿ ಅಥವಾ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸ್ಪಷ್ಟ ನಿಲುವು ತಿಳಿಸಲು ಆ ಪಕ್ಷಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
2018 ರ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆ ಪಕ್ಷ ಮತ್ತಷ್ಟು ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಭವಿಷ್ಯ ನುಡಿದರು.
ಟಿಕೆಟ್‌ಗಾಗಿ ಬಿಜೆಪಿ ಪಕ್ಷದಲ್ಲಿ ಎದುರಾಗಿರುವ ತೀವ್ರ ಪೈಪೋಟಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ. ಹಲವು ಆಕಾಂಕ್ಷಿಗಳಿರುವುದು ನಿಜ, ವಾರಾಂತ್ಯದಲ್ಲಿ ಪಕ್ಷ ಸಭೆ ಸೇರಿ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ನಿರ್ಧರಿಸಲಾಗುವುದು. ತಾಲೂಕು ಮತ್ತು ಜಿಲ್ಲಾ ಮಟ್ಟದ ಸಮಿತಿಗಳಲ್ಲಿ ಕಾರ್ಯಕರ್ತರ ಅಭಿಪ್ರಾಯಗಳನ್ನು ಪರಿಗಣಿಸಿ, ಚರ್ಚಿಸಿ, ವಿಶ್ಲೇಷಿಸಿ ಪ್ರಜಾಸತ್ತಾತ್ಮಕವಾಗಿ ಅಭ್ಯರ್ಥಿ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ. ಪ್ರತಿ ಕ್ಷೇತ್ರಕ್ಕೆ ಮೂರು ಹೆಸರುಗಳನ್ನು ಶಿಫಾರಸು ಮಾಡಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


