'ಕೈ' ಟಿಕೆಟ್ ವಂಚಿತ ನಾಗರಾಜ ಛಬ್ಬಿ ಬಿಜೆಪಿಗೆ ಸೇರ್ಪಡೆ
ವಿಧಾನಪರಿಷತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಟಿಕೆಟ್ ವಂಚಿತ ನಾಗರಾಜ್ ಛಬ್ಬಿ ಇಂದು ಬಿಜೆಪಿಗೆ ಸೇರ್ಪಡೆಯಾದರು. ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ಪಕ್ಷದ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ನವದೆಹಲಿ: ವಿಧಾನಪರಿಷತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಟಿಕೆಟ್ ವಂಚಿತ ನಾಗರಾಜ್ ಛಬ್ಬಿ ಇಂದು ಬಿಜೆಪಿಗೆ ಸೇರ್ಪಡೆಯಾದರು. ನವದೆಹಲಿಯಲ್ಲಿ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ಪಕ್ಷದ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತ್ತಿತರರು ಉಪಸ್ಥಿತರಿದ್ದರು.
ಕಲಘಟಗಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ನಾಗರಾಜ್ ಛಬ್ಬಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಆಪ್ತರಾಗಿದ್ದರು. ಆದರೆ, ಕಾಂಗ್ರೆಸ್ ಪಕ್ಷ ಸಿದ್ದು ಆಪ್ತರಾದ ಸಂತೋಷ್ ಲಾಡ್ ಅವರಿಗೆ ಟಿಕೆಟ್ ನೀಡಿದೆ. ಇದರಿಂದಾಗಿ ಸಿಡಿದೆದ್ದ ನಾಗರಾಜ್ ಛಬ್ಬಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


