ವಿಧಾನಸಭೆ ಚುನಾವಣೆ: ಬಿಜೆಪಿ ಬಿಡುಗಡೆ ಮಾಡಿದ ಮೊದಲ ಪ್ರಚಾರ ವಿಡಿಯೊ ಹೇಗಿದೆ ನೋಡಿ....
ಕರ್ನಾಟಕದಲ್ಲಿ ಈಗ ಬೇಸಿಗೆಯ ಬಿಸಿಲಿನಂತೆ ವಿಧಾನಸಭೆ ಚುನಾವಣೆ ಕಾವು ಏರುತ್ತಿದೆ. ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿದ್ದು, ಮುಂದಿನ ತಿಂಗಳು ಮೇ 10ಕ್ಕೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಏಕಕಾಲಕ್ಕೆ ಮತದಾನ ಪ್ರಕ್ರಿಯೆ ಸಾಗಲಿದೆ.

ಬೆಂಗಳೂರು: ಕರ್ನಾಟಕದಲ್ಲಿ ಈಗ ಬೇಸಿಗೆಯ ಬಿಸಿಲಿನಂತೆ ವಿಧಾನಸಭೆ ಚುನಾವಣೆ ಕಾವು ಏರುತ್ತಿದೆ. ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿದ್ದು, ಮುಂದಿನ ತಿಂಗಳು ಮೇ 10ಕ್ಕೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಏಕಕಾಲಕ್ಕೆ ಮತದಾನ ಪ್ರಕ್ರಿಯೆ ಸಾಗಲಿದೆ.
ಚುನಾವಣೆ ಹೊತ್ತಿನಲ್ಲಿ ಪಕ್ಷಗಳು, ಅಭ್ಯರ್ಥಿಗಳು ಮತದಾರರ ಮನಸ್ಸನ್ನು ಸೆಳೆಯಲು ನಾನಾ ತಂತ್ರಗಳನ್ನು ರೂಪಿಸುತ್ತವೆ. ಪಕ್ಷಗಳ ಕೆಲಸ, ಕಾರ್ಯಗಳು, ಯೋಜನೆಗಳು, ಪ್ರಣಾಳಿಕೆಗಳನ್ನು ಮತದಾರರ ಮನೆಮನೆಗೆ ತಲುಪಿಸಲು, ಜನಪ್ರಿಯಗೊಳಿಸಲು ಸಿನಿಮಾ ಸ್ಟಾರ್ ಗಳನ್ನು ಪ್ರಚಾರಕ್ಕೆ ನಾಯಕರು ಬಳಸಿಕೊಳ್ಳುತ್ತಾರೆ. ಅದೇ ರೀತಿ ಸಿನಿಮಾ ಹಾಡುಗಳನ್ನು ತಮ್ಮ ಪ್ರಚಾರದಲ್ಲಿ ಬಳಸಿಕೊಳ್ಳುವುದುಂಟು.
ಇತ್ತೀಚೆಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಿ ಆಸ್ಕರ್ ಪ್ರಶಸ್ತಿಯನ್ನು ಸಹ ಗೆದ್ದುಕೊಂಡ ಎಸ್ ಎಸ್ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಚಿತ್ರದ 'ನಾಟು ನಾಟು' ಹಾಡನ್ನು ಬಿಜೆಪಿ ತನ್ನ ಚುನಾವಣಾ ಪ್ರಚಾರದಲ್ಲಿ ಬಳಸಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


