ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾದ ಎಂ.ಪಿ.ಕುಮಾರಸ್ವಾಮಿ
ಮೂಡಿಗೆರೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿದ್ದ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಶುಕ್ರವಾರ ಕೇಸರಿ ಪಕ್ಷ ತೊರೆದು ಜೆಡಿಎಸ್ ಸೇರಿದ್ದಾರೆ.

ಬೆಂಗಳೂರು: ಮೂಡಿಗೆರೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿದ್ದ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಶುಕ್ರವಾರ ಕೇಸರಿ ಪಕ್ಷ ತೊರೆದು ಜೆಡಿಎಸ್ ಸೇರಿದ್ದಾರೆ.
ಇಂದು ಶೇಷಾದ್ರಿಪುರಂನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಎಂ.ಪಿ.ಕುಮಾರಸ್ವಾಮಿ ಅವರು ಜೆಡಿಎಸ್ ಸೇರ್ಪಡೆ ಆದರು. ಇದಕ್ಕು ಮುನ್ನ ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಎಂ.ಪಿ.ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿದ್ದರು.
ಈ ವೇಳೆ ಮಾತನಾಡಿದ ಕುಮಾರಸ್ವಾಮಿ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ದಿನ ದೊಡ್ಡ ಪ್ರಮಾಣದಲ್ಲಿ ನಾಯಕರು ವಿವಿಧ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ನಮ್ಮ ಪಕ್ಷದ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು.
ಜೆಪಿ ಭವನದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ರಘು ಆಚಾರ್, ಬಿಜೆಪಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಸೇರಿದಂತೆ ಹಲವು ಮುಖಂಡರು ಜೆಡಿಎಸ್ ಸೇರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


