ರಾಜಕೀಯ

ಮೀಸಲಾತಿ ವಿಚಾರದಲ್ಲಿ ಸರ್ಕಾರ ಎಲ್ಲಾ ವರ್ಗದ ಜನರಿಗೆ ವಂಚಿಸಿದೆ, ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಬೇಕು: ಕಾಂಗ್ರೆಸ್

ಒಬಿಸಿ ಲಿಂಗಾಯಿತರು ಸೇರಿದಂತೆ ಎಲ್ಲಾ ಸಮುದಾಯಗಳಿಗು ಬಿಜೆಪಿ ಸರ್ಕಾರ ದ್ರೋಹ ಬಗೆದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಎಐಸಿಸಿ ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಶುಕ್ರವಾರ ಆಗ್ರಹಿಸಿದ್ದಾರೆ.

ಮೀಸಲಾತಿ ವಿಚಾರದಲ್ಲಿ ಸರ್ಕಾರ ಎಲ್ಲಾ ವರ್ಗದ ಜನರಿಗೆ ವಂಚಿಸಿದೆ, ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಬೇಕು: ಕಾಂಗ್ರೆಸ್
ಎಐಸಿಸಿ ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ
Published On :

ಬೆಂಗಳೂರು: ಒಬಿಸಿ ಲಿಂಗಾಯಿತರು ಸೇರಿದಂತೆ ಎಲ್ಲಾ ಸಮುದಾಯಗಳಿಗು ಬಿಜೆಪಿ ಸರ್ಕಾರ ದ್ರೋಹ ಬಗೆದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಎಐಸಿಸಿ ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಶುಕ್ರವಾರ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರ ಶೇಕಡಾ 4 ರಷ್ಟು ಕೋಟಾವನ್ನು ರದ್ದುಗೊಳಿಸಿರುವುದು ದೋಷಪೂರಿತ ಎಂದು ಸುಪ್ರೀಂಕೋರ್ಟ್ ಹೇಳಿದ್ದು, ಇತರ ಸಮುದಾಯಕ್ಕೆ ನೀಡಲಾಗಿರುವ ಮೀಸಲಾತಿಯನ್ನು ಮುಂದಿನ ವಿಚಾರಣೆಯವರೆಗೆ ನ್ಯಾಯಾಲಯ ತಡೆಹಿಡಿದಿದೆ. ಬೊಮ್ಮಾಯಿ ಸರ್ಕಾರ ತೊಂಬತ್ತು ದಿನಗಳ ಅವಧಿಯಲ್ಲಿ ಮೂರು ಬಾರಿ ಮೀಸಲಾತಿಯನ್ನು ಬದಲಾಯಿಸಿದೆ. ಮೀಸಲಾತಿ ಹೆಚ್ಚಳ ಅಥವಾ ಬದಲಾವಣೆಯ ಪ್ರಸ್ತಾಪವು ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಆಧರಿಸಿಲ್ಲ. ಈ ಮೂಲಕ ಎಸ್‌ಸಿ/ಎಸ್‌ಟಿಗಳು, ಅಲ್ಪಸಂಖ್ಯಾತರು, ಒಕ್ಕಲಿಗರು ಮತ್ತು ಲಿಂಗಾಯತರಿಗೆ ವಂಚಿಸಿದೆ ಎಂದು ಆರೋಪಿಸಿದರು.

ಬಿಜೆಪಿ ಮತ್ತು ಬೊಮ್ಮಾಯಿ ಸರಕಾರ ಅಕ್ಷಮ್ಯ ಅಪರಾಧ ಎಸಗಿದೆ. ಸರ್ಕಾರ ನೀಡಿರುವ ಮೀಸಲಾತಿ ಹೆಚ್ಚಳಕ್ಕೆ ಸಾಂವಿಧಾನಿಕ ಹಾಗೂ ಕಾನೂನು ಮಾನ್ಯತೆಗಳಿಲ್ಲ. ‘ಬಿಜೆಪಿ ಸರ್ಕಾರ ಚುನಾವಣಾ ಸಮಯದಲ್ಲಿ ಕೇವಲ ಸುಳ್ಳು ಮೀಸಲಾತಿ ನೀಡುವ ಮೂಲಕ ರಾಜ್ಯದ ಜನತೆಗೆ ದ್ರೋಹ ಬಗೆಯಲು ಪ್ರಯತ್ನಿಸಿದೆ’ ಎಂದು ಹೇಳಿದರು.

ಶೇ.50 ರಷ್ಟು ಮೀರಿದ ಮೀಸಲಾತಿ ಮಿತಿಗೆ ಸಾಂವಿಧಾನಿಕ ಬೆಂಬಲ ಇರಬೇಕು. ಕಾಂಗ್ರೆಸ್ ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತದೆ ತಿಳಿಸಿದರು.

ಸರ್ಕಾರ ಉದ್ದೇಶಪೂರ್ವಕವಾಗಿ ಇಂತಹ ಪ್ರಯತ್ನಗಳನ್ನು ಮಾಡಿದ್ದು, ಇದು ಮೂರ್ಖತನದ ಪರಮಾವಧಿಯಾಗಿದೆ.  ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ. ಸಮುದಾಯಗಳಿಗೆ ಮೀಸಲಾತಿ ತಡೆದ ಹೊಣೆ ಹೊತ್ತು ಬೊಮ್ಮಾಯಿ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.