ಶಿಗ್ಗಾವಿ ಕ್ಷೇತ್ರ: ಬಿಜೆಪಿ ಅಭ್ಯರ್ಥಿಯಾಗಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ
ಹಾವೇರಿ ಜಿಲ್ಲೆ ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ನಾಮಪತ್ರ ಸಲ್ಲಿಸಿದರು. ಶಿಗ್ಗಾವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಸಿ ಎಂ ಬಸವರಾಜ ಬೊಮ್ಮಾಯಿ ಜೊತೆಯಲ್ಲಿ ಸಚಿವ ಸಿ ಸಿ ಪಾಟೀಲ್, ಸಂಸದ ಶಿವಕುಮಾರ್ ಉದಾಸಿ ಉಪಸ್ಥಿತರಿದ್ದರು.

ಶಿಗ್ಗಾವಿ: ಹಾವೇರಿ ಜಿಲ್ಲೆ ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ನಾಮಪತ್ರ ಸಲ್ಲಿಸಿದರು. ಶಿಗ್ಗಾವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಸಿ ಎಂ ಬಸವರಾಜ ಬೊಮ್ಮಾಯಿ ಜೊತೆಯಲ್ಲಿ ಸಚಿವ ಸಿ ಸಿ ಪಾಟೀಲ್, ಸಂಸದ ಶಿವಕುಮಾರ್ ಉದಾಸಿ ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಒಳ್ಳೆಯ ದಿನವಾಗಿರುವ ಕಾರಣ ನಾನು ನಾಮಪತ್ರ ಸಲ್ಲಿಸುವೆ, ಏಪ್ರಿಲ್ 19ರಂದು ಮತ್ತೊಮ್ಮೆ ಉಮೇದುವಾರಿಕೆ ಸಲ್ಲಿಸುವೆ ಎಂದರು.
ಟಿಕೆಟ್ ಹಂಚಿಕೆ ವಿಚಾರವಾಗಿ ಮಾತನಾಡಿದ ಸಿಎಂ ಬೊಮ್ಮಾಯಿ, ಟಿಕೆಟ್ ಹಂಚಿಕೆ ಬಳಿಕೆ ಗೊಂದಲವಿರುವುದು ಸಹಜ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುತ್ತಿದೆ. ಜಗದೀಶ್ ಶೆಟ್ಟರ್ ಮನವೊಲಿಸುವ ಕಾರ್ಯವೂ ನಡೆಯುತ್ತಿದೆ. ಜಗದೀಶ್ ಶೆಟ್ಟರ್ ಅವರನ್ನ ಉಳಿಸಿಕೊಳ್ಳುವ ಪ್ರಯತ್ನ ಆಗುತ್ತಿದೆ. ನಿನ್ನೆ ಧರ್ಮೇಂದ್ರ ಪ್ರಧಾನ್ ಜೊತೆ ಮಾತುಕತೆ ನಡೆಸಿದ್ದಾರೆ. ನಡ್ಡಾ ಅವರ ಜೊತೆ ನಾನೂ ಮಾತನಾಡಿದ್ದೇನೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


