ರಾಜಕೀಯ

ಕಾಂಗ್ರೆಸ್ ಗೆ ಶೆಟ್ಟರ್ ಕರೆತರಲು ಶಿವಶಂಕರಪ್ಪ,ಎಂಬಿ ಪಾಟೀಲ್ ಗೆ ಜವಾಬ್ದಾರಿ!

ಟಿಕೆಟ್ ಕೈ ತಪ್ಪಿದ್ದರಿಂದ ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಗೆ ಕರೆತರಲು ಲಿಂಗಾಯಿತ ನಾಯಕರಾದ ಎಂಬಿ ಪಾಟೀಲ್ ಹಾಗೂ ಶಾಮನೂರು ಶಿವಶಂಕರಪ್ಪ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

ಕಾಂಗ್ರೆಸ್ ಗೆ ಶೆಟ್ಟರ್ ಕರೆತರಲು ಶಿವಶಂಕರಪ್ಪ,ಎಂಬಿ ಪಾಟೀಲ್ ಗೆ ಜವಾಬ್ದಾರಿ!
ಶೆಟ್ಟರ್, ಶಾಮನೂರು ಶಿವಶಂಕರಪ್ಪ, ಎಂಬಿ ಪಾಟೀಲ್
Published On :

ಬೆಂಗಳೂರು: ಟಿಕೆಟ್ ಕೈ ತಪ್ಪಿದ್ದರಿಂದ ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ  ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಗೆ ಕರೆತರಲು ಲಿಂಗಾಯಿತ ನಾಯಕರಾದ ಎಂಬಿ ಪಾಟೀಲ್ ಹಾಗೂ ಶಾಮನೂರು ಶಿವಶಂಕರಪ್ಪ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

ಬೀಗರಾಗಿರುವ ಜಗದೀಶ್ ಶೆಟ್ಟರ್ ಜೊತೆಗೆ ಶಾಮನೂರು ಶಿವಶಂಕರಪ್ಪ ಮಾತುಕತೆ ನಡೆಸಿ, ಕಾಂಗ್ರೆಸ್ ಪಕ್ಷ ಸೇರುವಂತೆ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಾಮನೂರು ಶಿವಶಂಕರಪ್ಪ ಅವರ ಸೂಚನೆ ಮೇರೆಗೆ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸಿದ್ದು, ರಾತ್ರಿ ಕಾಂಗ್ರೆಸ್ ಮುಖಂಡರೊಂದಿಗೆ ಚರ್ಚೆ ಬಳಿಕ ನಾಳೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ನಂಬಲಾರ್ಹ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಎಂಬಿ ಪಾಟೀಲ್ ಕೂಡಾ ಶೆಟ್ಟರ್ ಅವರ ಸಂಬಂಧಿಯಾಗಿದ್ದು, ಕಾಂಗ್ರೆಸ್ ವರಿಷ್ಠರನ್ನು ವಿಶ್ವಾಸಕ್ಕೆ ತೆಗೆದುಕೊಂಡು  ಶೆಟ್ಟರ್ ಪಕ್ಷ ಸೇರ್ಪಡೆ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಶೆಟ್ಟರ್ ಸೇರ್ಪಡೆಯಿಂದ ಬಿಎಸ್ ಯಡಿಯೂರಪ್ಪ ಪ್ರಭಾವದಿಂದ ಬಿಜೆಪಿಗೆ ವೋಟ್ ಬ್ಯಾಂಕ್ ಆಗಿರುವ  ಲಿಂಗಾಯತ ಮತದಾರರನ್ನು ಕಾಂಗ್ರೆಸ್ ನತ್ತ ಸೆಳೆಯಲು ನೆರವಾಗಲಿದೆ ಎಂದು ಮೂಲಗಳು ಹೇಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.